ಬೆಂಗಳೂರಿಗೆ ಆಗಮಿಸಿದ‌ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್ ಆತ್ಮೀಯವಾಗಿ ಬರಮಾಡಿಕೊಂಡ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Banglore:

Font size:

ಬೆಂಗಳೂರಿಗೆ ಆಗಮಿಸಿದ‌ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್ ಆತ್ಮೀಯವಾಗಿ ಬರಮಾಡಿಕೊಂಡ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ಜೂ .7 -
ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಜಗದೀಪ್‌ ಧನಕರ್ ಅವರು ಇಂದು ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ‌ಆಗಮಿಸಿದರು.
ಗೌರವಾನ್ವಿತ ಉಪ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಮಯದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ವೀರಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ. ಸಲೀಂ, ‌ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್,‌ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್. ಜಿ. ಉಪಸ್ಥಿತರಿದ್ದರು.

Prev Post ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್ ಸಿಬಿ! ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಚ್ಚರಿ
Next Post ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ