ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಖಾತಾ ಪರಿವರ್ತನೆ ಇದೊಂದು ಹಗಲು ದರೋಡೆ ದಂಧೆ ಡಿಕೆಶಿ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

Ramanagara:

Font size:

|| ಧಮ್ಮು ತಾಕತ್ತಿನ ಬಗ್ಗೆ ಮಾತನಾಡುವುದಲ್ಲ, ರಾಜ್ಯ ಸರ್ಕಾರದಿಂದ ಭೂಮಿ ಕೊಡಿ || || ಕುಮಾರಣ್ಣನಿಗೆ ತಾಕತ್ತಿದೆ, ಜಾಗ ಕೊಡಿಸಿ DKSಗೆ ನಿಖಿಲ್ ಕುಮಾರಸ್ವಾಮಿ ಸವಾಲು || ||ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? - ಡಿಕೆಶಿ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ|| || ಬಹಿರಂಗ ಚರ್ಚೆಗೆ HDK ಗೆ ಆಹ್ವಾನಿಸಿದ ಡಿ.ಕೆ ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು|| || ರಾಜ್ಯ ಸರ್ಕಾರದ ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಜನತೆ ಬಲಿಪಶುರಾಗುತ್ತಿದ್ದಾರೆ|| || ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಮಂಡಲ||

ರಾಮನಗರ: ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಚನ್ನಪಟ್ಟಣದಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ಸರ್ಕಾರದ ಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ಆದಾಯ ತರಲು ಹೊರಟಿದ್ದಾರೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಹೊರಟಿದ್ದಾರೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್ ಆರ್ ವ್ಯಾಲ್ಯೂ ಮೇಲೆ ದರ ಪಿಕ್ಸ್ ಮಾಡಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ಆಗ್ರಹಿಸಿದರು.

ಬೆಂಗಳೂರಲ್ಲಿ 7.5 ಲಕ್ಷ ಮನೆಗಳು ಇದಕ್ಕೆ ಒಳಪಡ್ತವೆ. ಅದಕ್ಕೆ 100 ದಿನ ಟೈಂ ಲೈನ್ ಪಿಕ್ಸ್ ಮಾಡಿದ್ದಾರೆ. ಖಾತೆ ವರ್ಗಾವಣೆಗೆ ಒಂದೊಂದು ಕಡೆ ಒಂದೊಂದು ಎಸ್ ಆರ್ ವ್ಯಾಲ್ಯೂ ಇದೆ. ಇದರಿಂದ ಮಾಧ್ಯಮ ವರ್ಗದ ಜನರಿಗೆ ತೊಂದರೆಯಾಗುತ್ತೆ. ಜನರಿಗೆ ಒತ್ತಡ ಹೇರಿ ಅವರ ಬಳಿ ಹಣ ಕಸಿದು ಅವರಿಗೆ ಗ್ಯಾರಂಟಿ ರೂಪದಲ್ಲಿ ವಾಪಸ್ಸ್ ಕೊಡ್ತಾವ್ರೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

HDK ಕೊಟ್ಟ ಕಾರ್ಯಕ್ರಮ ಜನರ ಮನಸ್ಸಿನಲ್ಲಿದೆ

ಕುಮಾರಸ್ವಾಮಿ ಖಾಲಿ ಟ್ರಂಕ್ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು; ಕುಮಾರಣ್ಣ ಅವರ ಕಾಲಘಟ್ಟದಲ್ಲಿ ಏನೇನು ಮಾಡಿದ್ದಾರೆ ಅಂತ ರಾಜ್ಯದ ಜನತೆಗೆ ಗೊತ್ತು. ಅಧಿಕಾರದಲ್ಲಿದ್ದಾಗ ಕೊಟ್ಟಂತ ಕಾರ್ಯಕ್ರಮ ಜನರ ಮನಸ್ಸಿನಲ್ಲಿದೆ. ಅದನ್ನ ಚುನಾವಣೆ ಸಂದರ್ಭದಲ್ಲಿ ಏನೆಲ್ಲಾ ಮಾಡಿದ್ದಾರೆ ಮಾತನಾಡ್ತೀವಿ ಎಂದು ಡಿಕೆಶಿಗೆ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.

*||ಭವಿಷ್ಯ ನುಡಿಯೋಕೆ ಡಿಕೆಶ ಜ್ಯೋತಿಷಿನಾ?

ಮುಂದೆ ಜೆಡಿಎಸ್ 8ರಿಂದ 9 ಸ್ಥಾನ ಬರುತ್ತೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಭವಿಷ್ಯ ನುಡಿಯೋಕೆ ಅವರ‌್ಯಾರು, ರಾಜ್ಯದ ಜನ ನಮ್ಮ ಭವಿಷ್ಯ ತೀರ್ಮಾನ ಮಾಡ್ತಾರೆ. ಭವಿಷ್ಯ ಹೇಳೋಕೆ ಅವರೇನು ಜ್ಯೋತಿಷ್ಯೀನಾ.? ಅವರು ಭವಿಷ್ಯ ನುಡಿಯಲಿ ಟೈಂ ಬಂದಾಗ ಮಾತಾಡ್ತೀವಿ ಎಂದು ಡಿಕೆ ಶಿವಕುಮಾರ್ ಗೆ ನಿಖಿಲ್ ಕುಮಾರಸ್ವಾಮಿ ಟಾಂಗ್ ನೀಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಶೂನ್ಯ. ಶಾಸಕರಿಗೆ ಅನುದಾನ ಕೊಡ್ತೀವಿ ಅಂತ ಹೇಳಿ ಕೊಟ್ಟಿಲ್ಲ.
ಒಬ್ಬ ಶಾಸಕನಿಗೆ 10ಕೋಟಿ ಅನುದಾನವೂ ಸಿಕ್ಕಿಲ್ಲ.
ಬಿಜೆಪಿ-ಜೆಡಿಎಸ್ ಬಿಡಿ ಕಾಂಗ್ರೆಸ್ ಶಾಸಕರೇ ಅನುದಾನ ಸಿಕ್ಕಿಲ್ಲ ಅಂತ ಹೇಳ್ತಾರೆ. ಕಂಟ್ರಾಕ್ಟರ್ ಗಳು ಕಥೆ ಏನಾಗಿದೆ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದ ಕಾಲಘಟ್ಟದಲ್ಲಿ ಅಭಿವೃದ್ಧಿ ಆಗ್ತಿಲ್ಲ ಎಂದು ಕಿಡಿಕಾರಿದರು.

ನವೆಂಬರ್ ಕ್ರಾಂತಿ ಅಂತ ಮಾತಾಡ್ತಾರೆ. ಅದೇನು ಕ್ರಾಂತಿ ಮಾಡ್ತಾರೋ ನೋಡೊಣ. ಇವರ ಕುರ್ಚಿ ಕಿತ್ತಾಟದ ನಡುವೆ ರಾಜ್ಯದ ಜನ ಬಲಿಪಶು ಆಗ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದರು.

Prev Post ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ: ಡಿಸಿಎಂ ಡಿ.ಕೆ. ಶಿವಕುಮಾರ್
Next Post ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ