Font size:
ಬಿಜೆಪಿ ರಾಜ್ಯ ಕಾರ್ಯಾಲಯದ ಬಳಿ “ಏಕತಾ ನಡಿಗೆ”
ಬೆಂಗಳೂರು: ಸರ್ದಾರ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದ ಬಳಿ ಇಂದು “ಏಕತಾ ನಡಿಗೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಕು.ಶೋಭಾ ಕರಂದ್ಲಾಜೆ ಅವರು ಮಾತನಾಡಿ, ವಲ್ಲಭಭಾಯಿ ಪಟೇಲ್ ಅವರ ಶ್ರೇಷ್ಠ ವ್ಯಕ್ತಿತ್ವ ಮತ್ತು ಜೀವನಾದರ್ಶಗಳ ಕುರಿತು ಮಾಹಿತಿ ನೀಡಿದರು.
ಸÀಂಸದ ಪಿ.ಸಿ. ಮೋಹನ್, ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್, ಬೆಂಗಳೂರು ಉತ್ತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ. ರಂಗಸ್ವಾಮಿ, ಬೆಂಗಳೂರು ಕೇಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂ. ಗೌತಮ್ ಕುಮಾರ್, ಆರ್. ರಾಘವೇಂದ್ರ ರಾವ್, ಮುಖಂಡ ಕಟ್ಟಾ ಜಗದೀಶ್ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.








