ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ ಹೆಚ್.ಡಿ. ಕುಮಾರಸ್ವಾಮಿ

Mangalore:

Font size:

*ರಾಜಕೀಯ ಬೆಳವಣಿಗೆ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಕೇಂದ್ರ ಸಚಿವರು

ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ ಹೆಚ್.ಡಿ. ಕುಮಾರಸ್ವಾಮಿ

*ರಾಜಕೀಯ ಬೆಳವಣಿಗೆ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಕೇಂದ್ರ ಸಚಿವರು*

*ರಾಜಕೀಯಕ್ಕೆ ಶ್ರೀಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಿದ್ದೆ*

*ಶ್ರೀಷಗಳಿಗೆ ಅಪಚಾರವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದ ಹೆಚ್ಡಿಕೆ*

*
*ಮಂಡ್ಯ:* ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಯಿಂದ ಶ್ರೀ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತರುವ ಕೃಷಿ ಮೇಳದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು ಇಲ್ಲ. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಶ್ರೀಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು.
ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ವಾತ್ಸಲ್ಯವಿತ್ತು. ನನ್ನಿಂದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದರು.

ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ‌ ಬಗ್ಗೆ ನಮ್ಮ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತಾಡಿದ್ದಕ್ಕೆ ಇನ್ಯಾರೋ ಮಾತಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ಓದಿಕೊಂಡವರು, ಶಿಕ್ಷಣ ಪಡೆದವರು ಮತ್ತೊಬ್ಬರು ಇಲ್ಲ. ಸ್ವಾಮೀಜಿಗಳು ಅವರದ್ದೆ ಆದ ಕಲ್ಪನೆಗಳನ್ನು ಹೊಂದಿರುತ್ತಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಲ್ಲ ಎಂದು ಅವರು ಹೇಳಿದರು.

*ಮುಕ್ತಾಯ*

Prev Post ಅಂಬೇಡ್ಕರ್ ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದರು : ಸಿಎಂ ಸಿದ್ದರಾಮಯ್ಯ
Next Post ಇಡಿ ಸಮನ್ಸ್ ಕಿರುಕುಳ ಖಂಡನೀಯ: ಡಿಸಿಎಂ ಡಿ.ಕೆ.ಶಿವಕುಮಾರ್