ಸಮಯ ಕೊಟ್ಟರೆ ಅಧಿವೇಶನ ಬಳಿಕ ಉತ್ತರಿಸಲು ಬರುವೆ ಔತಣಕೂಟದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಭೇಟಿ
ದೆಹಲಿ, ಡಿ.16:
"ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.
ದೆಹಲಿ ಪೊಲೀಸರ ನೋಟೀಸ್ ಗೆ ಉತ್ತರ ನೀಡುವ ಬಗ್ಗೆ ಕೇಳಿದಾಗ, “ಸೋಮವಾರ ದೆಹಲಿ ಪೊಲೀಸರಿಗೆ ಉತ್ತರ ನೀಡಲು ನಿರ್ಧರಿಸಿದ್ದೆ. ಆದರೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ” ಎಂದು ತಿಳಿಸಿದರು.
“ಪೊಲೀಸರು ನೀಡಿರುವ ನೋಟಿಸ್ ಗೆ ನನ್ನ ಉತ್ತರದ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತೇನೆ. ಏಕೆಂದರೆ ಅವರು ಎಫ್ಐಆರ್ ಪ್ರತಿಯನ್ನು ಲಗತ್ತಿಸಿಲ್ಲ. ಇ.ಡಿ.ಗೆ ಈಗಾಗಲೇ ಉತ್ತರ ನೀಡಿದ್ದೇವೆ. ಎಫ್ಐಆರ್ ಪ್ರತಿಯಲ್ಲಿ ಏನಿದೆ ಎಂದು ಓದಿಲ್ಲ. ಕೇವಲ ನೋಟಿಸ್ ಮಾತ್ರ ನೀಡಿದ್ದಾರೆ. ಎಫ್ಐಅರ್ ಪ್ರತಿ ನೀಡಿ ಎಂದು ಕೇಳುತ್ತೇನೆ” ಎಂದು ತಿಳಿಸಿದರು.
ಕೆ.ಸಿ ವೇಣುಗೋಪಾಲ್ ಹಾಗೂ ಸುರ್ಜೆವಾಲ ಅವರನ್ನು ಭೇಟಿಯಾಗಿರುವ ಬಗ್ಗೆ ಕೇಳಿದಾಗ, "ನಾನು ದೆಹಲಿಗೆ ಬಂದಾಗ ಎಲ್ಲರನ್ನೂ ಭೇಟಿ ಮಾಡಬೇಕು. ಸುರ್ಜೆವಾಲ ಅವರನ್ನು, ಮಲ್ಲಿಕಾರ್ಜುನ ಖರ್ಗೆ ಸಾಹೇಬರನ್ನು, ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಬೇಕು. ನಿನ್ನೆ ಇಂದಿರಾ ಭವನದಲ್ಲಿ ನಡೆದ ಭೋಜನ ಕೂಟದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದೆ” ಎಂದು ತಿಳಿಸಿದರು.
ಇಂದು ವೈಯಕ್ತಿಕವಾಗಿ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಇಂದು ಖರ್ಗೆ ಸಾಹೇಬರ ಜೊತೆಯಲ್ಲೇ ದಾವಣಗೆರೆಗೆ ಹೋಗುತ್ತಿದ್ದೇವೆ. ತುರ್ತು ಕಾರಣಕ್ಕೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಮಂಜು ಕವಿದ ವಾತಾವರಣ ಇರುವ ಕಾರಣಕ್ಕೆ ತಡವಾಯಿತು" ಎಂದರು.
ಅಧಿವೇಶನ ಮುಗಿದ ಬಳಿಕ ಮತ್ತೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಪಕ್ಷದಲ್ಲಿ ನಮ್ಮ ಅವರ ಮಧ್ಯೆ ಮಾತುಕತೆ ಇದ್ದೇ ಇರುತ್ತದೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ” ಎಂದು ತಿಳಿಸಿದರು.
ದಾವಣಗೆರೆಗೆ ಭೇಟಿ ನೀಡಿದಾಗಲೆಲ್ಲ ಅವರ ಗೆಸ್ಟ್ ಹೌಸ್ ನಲ್ಲಿ ಉಳಿಯುತ್ತಿದ್ದು, ಅವರ ಒತ್ತಾಯದ ಮೇರೆಗೆ ಅವರ ಮನೆಯಲ್ಲಿಯೇ ಊಟ ಮಾಡುತ್ತಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ತಮ್ಮ 75ನೇ ಜನ್ಮದಿನವನ್ನು ದಾವಣಗೆರೆಯಲ್ಲಿಯೇ ಆಚರಿಸಿಕೊಂಡಿದ್ದನ್ನು ಅವರು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡರು.
ನೆರವಿನಹಸ್ತ ಚಾಚುತ್ತಿದ್ದರು
ಶ್ಯಾಮನೂರು ಶಿವಶಂಕರಪ್ಪ ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದರು. ಕೋವಿಡ್ ಸಂದರ್ಭದಲ್ಲಿ ಆರು ಕೋಟಿಗೂ ಹೆಚ್ಚು ವೆಚ್ಚ ಮಾಡಿ ಆಕ್ಸಿಜನ್ ಸರಬರಾಜು ಮಾಡಿದ್ದರು ಎಂದರು.
ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
15 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿದಾಗ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ದೊಡ್ಡ ಕುಟುಂಬ ಹಾಗೂ ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದು ಭಗವಂತ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಸಂತಾಪದಲ್ಲಿ ತಿಳಿಸಿದರು.





