*ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಸಚಿವ ಪ್ರಲ್ಹಾದ ಜೋಶಿ

New Delhi:

Font size:

*ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಸಚಿವ ಪ್ರಲ್ಹಾದ ಜೋಶಿ

*ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಸಚಿವ ಪ್ರಲ್ಹಾದ ಜೋಶಿ*

* ಪ್ರಲ್ಹಾದ ಜೋಶಿ ಅವರ ಒತ್ತಾಸೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ತ್ವರಿತ ಸ್ಪಂದನೆ; ಪತ್ರ ಮುಖೇನ ಭರವಸೆ
* 2026ರ ಮೇ ಅಂತ್ಯಕ್ಕೆ DPR ಸಿದ್ಧತೆ; ಆಗಲೇ ಮುಗಿದಿರುವ ಸರ್ವೇ ಕಾರ್ಯ

ನವದೆಹಲಿ: ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಇನ್ನೈದು ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಲ್ಹಾದ ಜೋಶಿ ಅವರಿಗೆ ಪತ್ರ ಬರೆದು ಸ್ಪಷ್ಟಪಡಿಸಿದ್ದಾರೆ. ಈ ರೈಲು ಮಾರ್ಗ ಕುರಿತು ಇಂದಷ್ಟೇ ಜೋಶಿ ಅವರು ಸಂಸತ್ ಭವನದಲ್ಲಿ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ರೈಲ್ವೆ ಸಚಿವರಿಂದ ತ್ವರಿತ ಸ್ಪಂದನೆ ದೊರೆತಿದೆ.

ಆಲಮಟ್ಟಿ - ಕುಷ್ಟಗಿ ನೂತನ ರೈಲ್ವೆ ಮಾರ್ಗದ ಸರ್ವೇ ಕಾರ್ಯ ಆಗಲೇ ಮುಗಿದಿದ್ದು, 2026ರ ಮೇ ಅಂತ್ಯದೊಳಗೆ DPR ತಯಾರಾಗಲಿದೆ ಎಂದು ಖುದ್ದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೇ ಪ್ರಲ್ಹಾದ ಜೋಶಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಈ ನೂತನ ರೈಲು ಮಾರ್ಗದ ಕುರಿತು
ವಿಜಯಪುರ ಸಂಸದರಾದ ರಮೇಶ್ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ್ ಅವರು ಸಚಿವ ಪ್ರಲ್ಹಾದ ಜೋಶಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಈ ರೈಲು ಮಾರ್ಗದ ಅಗತ್ಯತೆ ಮನಗಂಡು ಸಚಿವ ಜೋಶಿ ಅವರು ಬುಧವಾರ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಚರ್ಚಿಸಿ ಮನವರಿಕೆ ಮಾಡಿಕೊಟ್ಟಿದ್ದರು. ಇದೀಗ ಜೋಶಿ ಅವರ ಒತ್ತಾಸೆಯಂತೆ ರೈಲ್ವೆ ಸಚಿವರು ನೂತನ ರೈಲು ಮಾರ್ಗಕ್ಕೆ ಸಮ್ಮತಿ ಸೂಚಿಸಿದ್ದಾರೆ.

ಕೇಂದ್ರ ಸರ್ಕಾರ, ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಹೆಚ್ಚು ಹೆಚ್ಚು ಕಲ್ಪಿಸುವ ಮೂಲಕ ವಾಣಿಜ್ಯೋದ್ಯಮ ಜತೆಗೆ ಸಂಚಾರ ಸುವ್ಯವಸ್ಥೆಗೂ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದಿರುವ ಪ್ರಲ್ಹಾದ ಜೋಶಿ,ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವರಿಗೆ, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಧನ್ಯವಾದ ತಿಳಿಸಿದ್ದಾರೆ

Prev Post ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ