ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿಯವರು ಸಮಾಜದ ಬಡವರ ಪರ ನಿಲುವು ಪ್ರಶಂಸಾರ್ಹ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಉದ್ದೇಶ
ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ
ಉಡುಪಿ, ಫೆಬ್ರವರಿ 25: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು.
ಅನೆದಾಳಿ:ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ರಮ
ಚಿಕ್ಕಮಗಳೂರಿನಲ್ಲಿ ಅನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಉತ್ತರಿಸುತ್ತಾ, ಅನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.
ಮಾದಕವಸ್ತುಗಳ ನಿಗ್ರಹ
ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.
ಕಾನೂನು ಕ್ರಮ
ಅಜೀಂಪ್ರೇಂಜಿ ವಿವಿಯ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ದಾಂಧಲೆ ನಡೆಸಿರುವ ಬಗ್ಗೆ ಉತ್ತರಿಸಿ, ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಗ್ಯಾರಂಟಿ ಯೋಜನೆ
ಗ್ಯಾರಂಟಿಗಳ ಬಗ್ಗೆ ಡಿಸಿಎಂ ಡಿಕೆಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ,ಗ್ಯಾರಂಟಿ ಯೋಜನೆಗಳಿಗೆ ವಾರ್ಷಕ 52000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ ಎಂದರು.
ಪರಿಸರವಾದಿಗಳೊಂದಿಗೆ ಚರ್ಚೆ
ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದೇ ಎಂಬುದಕ್ಕೆ ಉತ್ತರಿಸುತ್ತಾ, ಇದಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಥೀಮ್ ಪಾರ್ಕ್ ಪೂರ್ಣಗೊಳಿಸಲಾಗುವುದು
ಕಾರ್ಕಾಳದಲ್ಲಿ ಪರುಶರಾಮ ಧೀಂ ಪಾರ್ಕ್ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಧೀಂ ಪಾರ್ಕ್ ನಿರ್ಮಾಣ ಯೋಜನೆಯನ್ನು ಸಧ್ಯದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದರು.
ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರ ಪ್ರಕರಣದಬಗ್ಗೆ ಮಾತನಾಡಿ, ಕಾರ್ಖಾನೆಯ ಗುಜರಿ ಮಾರಾಟ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.
ಶಾಸಕರು ಸಚಿವರಾಗಲು ಬಯಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಶಾಸಕರು ಸಚಿವರಾಗಬಯಸುವುದು ತಪ್ಪಲ್ಲ. ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ.
೦೦
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿಯವರು ಸಮಾಜದ ಬಡವರ ಪರ ನಿಲುವು ಪ್ರಶಂಸಾರ್ಹ
ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಉದ್ದೇಶ
ಉಡುಪಿ, ಫೆಬ್ರವರಿ 25:ವೈಚಾರಿಕ ಮತ್ತು ವೈಜ್ಞಾನಿಕತೆಯ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಅದರ ಮೂಲ ಉದ್ದೇಶವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಿಸಾನ್ ಸಭಾ ಸಭಾಂಗಣದ ಉದ್ಘಾಟಿಸಿ, ಟ್ರಸ್ಟ್ ನ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ35 ನೇ ವರ್ಷದ ಸಮಾರಂಭ ವನ್ನು ಉದ್ಘಾಟಿಸಿದ ನಂತರ ಮಾತನಾಡಿದರು.
ಪ್ರಾಮಾಣಿಕ ರಾಜಕಾರಣಿ
ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿಕೊಳ್ಳುತ್ತಾ, ತಾನು ಕುಟುಂಬದ ಮೊದಲ ಪದವೀಧರನಾಗಿದ್ದು, ವೀರಪ್ಪ ಮೊಯಿಲಿಯವರಂತೆ ತಾನೂ ಕಷ್ಟದ ಜೀವನವನ್ನು ಕಂಡಿರುವುದಾಗಿ ತಿಳಿಸಿದರು. ವೀರಪ್ಪ ಮೊಯಿಲಿಯವರು ಸಮಾಜದ ಬಡವರ್ಗದವರ ಪರವಾಗಿ ನಿಂತಿದ್ದರು. ತಮ್ಮ ವಕೀಲ ವೃತ್ತಿಯಲ್ಲಿ ಬಡವರಿಗೆ ಉಚಿತವಾಗಿ ವಕಾಲತ್ತು ಮಾಡುತ್ತಿದ್ದು, ತಮ್ಮ ವಕೀಲ ವೃತ್ತಿ ಹಾಗೂ ರಾಜಕೀಯ ಬದುಕಿನಲ್ಲಿ ಪ್ರಾಮಾಣಿಕತೆಯನ್ನು ಮರೆದಿದ್ದಾರೆ. ಅವರು ಶತಾಯುಷಿಗಳಾಗಿ ಸಮಾಜ ಸೇವೆ ನಿರಂತರವಾಗಿ ಸಾಗಲಿ ಎಂದು ಹಾರೈಸಿದರು.
ಶಿಕ್ಷಣದಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆ ಅಗತ್ಯ.
ಕಾರ್ಕಾಳದಲ್ಲಿ ಕಿಸಾನ್ ಸಭಾ ಪ್ರಾರಂಭಿಸಿ, ನಂತರ ಪ್ರೌಢಶಾಲೆಯನ್ನು ಸ್ಥಾಪಿಸಿ, ನಿರ್ಗತಿಕ ಹಾಗೂ ಓದಿನಲ್ಲಿ ಹಿಂದುಳಿದಿರುವ ಮಕ್ಕಳಿಗೆ ಶಿಕ್ಷಣ ನೀಡುವ ಉತ್ತಮ ಕಾರ್ಯದಲ್ಲಿ ವೀರಪ್ಪ ಮೊಯಿಲಿಯವರು ತೊಡಗಿರುವುದು ಸಂತೋಷದ ವಿಷಯ. ಈ ಶಾಲೆಯು 35 ವರ್ಷಗಳನ್ನು ಪೂರೈಸಿದ್ದು, ಇನ್ನೂ ಎತ್ತರಕ್ಕೆ ಬೆಳೆಯುವಂತಾಗಲಿ ಹಾಗೂ ಇಲ್ಲಿನ ವಿದ್ಯಾರ್ಥಿಗಳು ವೈಚಾರಿಕ ಹಾಗೂ ವೈಜ್ಞಾನಿಕ ಚಿಂತನೆಯನ್ನು ಅಳವಡಿಸಿಕೊಳ್ಳುವಂತಾಗಲಿ ಎಂದು ಹಾರೈಸಿದರು. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಉದ್ದೇಶ ಎಂದರು. 12 ರಿಂದ 15 % ಇದ್ದ ರಾಜ್ಯದಲ್ಲಿ ಸಾಕ್ಷರತೆ ಿಂದು 75 % ಹೆಚ್ಚಿದ್ದರೂ, ಶಿಕ್ಷಣದಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆ ಇಲ್ಲದಿರುವುದು ಗಮನಿಸಲಾಗಿದೆ ಎಂದರು.
ಆರ್ಥಿಕ ಸಾಮಾಜಿಕ ಸಮಾನತೆಯಿಂದ ರಾಜಕೀಯ ಸ್ವಾತಂತ್ರ್ಯ
ಸಮಾನ ಅವಕಾಶಗಳನ್ನು ಕೊಡುವುದು ಶಿಕ್ಷಣ ಮೂಲ ಉದ್ದೇಶವಾಗಬೇಕು. ಅಸಮಾನತೆಯಿಂದ ಕೂಡಿದ ಸಮಾಜ ವ್ಯವಸ್ಥೇಯಲ್ಲಿ ಶೂದ್ರ ವರ್ಗ ಅಕ್ಷರ ಸಂಸ್ಕೃತಿಯಿಂದ ವಂಚಿತವಾಗಿತ್ತು. ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದೇ, ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ ವೆಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿದ್ದರು.
ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ
ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ. ಕಾರ್ಕಾಳ ಜನತೆಯ ಬೇಡಿಕೆಗಳನ್ನು ಹಂತ ಹಂತವಾಗಿ ಪೂರೈಸಲಾಗುವುದು. 2013 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ನೀಡಲಾಗಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. 2023ರಲ್ಲಿ ಪುನ: ಅಧಿಕಾರಕ್ಕೆ ಬಂದು, 590 ಭರವಸೆಗಳನ್ನು ಕಳೆದ ಎರಡೂವರೆ ವರ್ಷದಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52000 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದ್ದು, ಎಲ್ಲ ಜಾತಿಧರ್ಮಗಳ ಬಡವರಿಗೆ ಗ್ಯಾರಂಟಿಯ ಸವಲತ್ತುಗಳನ್ನು ನೀಡಲಾಗುತ್ತಿದೆ. ಎಲ್ಲ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ, ಇದುವರೆಗೆ 1.20 ಲಕ್ಷ ಕೋಟಿಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ. ದೇಶದ ಸಂಪತ್ತಿನ ಸಮಾನ ಹಂಚಿಕೆಗೆ ನಮ್ಮ ಪ್ರಯತ್ನ ಸದಾ ಇರಲಿದೆ ಎಂದರು.
ಮಹಾಮಸ್ತಕಾಭಿಷೇಕಕ್ಕೆ ಸರ್ಕಾರ ನೆರವು-ಸಿಎಂ ಭರವಸೆ
ಕಾರ್ಕಾಳದಲ್ಲಿ 2027ರಲ್ಲಿ ನಡೆಯುವ ಐತಿಹಾಸಿಕ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಅರ್ಥಿಕ ಸಹಾಯವನ್ನು ಇಲ್ಲಿನ ಜನಪ್ರತಿನಿಧಿಗಳು ಕೋರಿದ್ದು, ಈ ಕಾರ್ಯಕ್ರಮಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.





