ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ, ಜಾತಿ ಗಣತಿ, ಮೀಸಲಾತಿ ಮತ್ತಿತರ ವಿಚಾರಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಚಿವರುಗಳ ಜೊತೆ ಸಭೆ

BANGALURU:

Font size:

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವರುಗಳ ಸಭೆಯಲ್ಲಿ ಚರ್ಚೆಯಾದ ಸಂಗತಿಗಳು/ ತೆಗೆದುಕೊಂಡ ತೀರ್ಮಾನಗಳು.

*ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಸಂಪೂರ್ಣ ಶ್ರಮ‌ ಹಾಕಿ ಚುನಾವಣೆ ನಿರ್ವಹಿಸಬೇಕು.

*ಪ್ರತೀ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಚಾಲೆಂಜಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು.

*ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯವರಿಂದ ಹಿಡಿದು ಸಿ.ಟಿ.ರವಿವರೆಗೂ ಪ್ರತಿಯೊಬ್ಬರೂ ರಾಶಿ ರಾಶಿ ಸುಳ್ಳು ಹೇಳಿದ್ದರು. ಈ ಚುನವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೇಳುತ್ತಲೇ ಇರುತ್ತಾರೆ. ಇವುಗಳನ್ನು ಸರಿಯಾಗಿ ಕೌಂಟರ್ ಮಾಡಬೇಕು.

*ಉಪಚುನಾವಣೆ ಮುಗಿಯುವರೆಗೂ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಮಾಣ ಇನ್ನೂ ಹೆಚ್ಚಲಿದೆ.

*ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತಂತೆ ಅಪಪ್ರಚಾರ ಮಾಡುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆಯೂ ನಮ್ಮ ನಿಲುವು ಸ್ಪಷ್ಟವಾಗಿದ್ದು ಆಯಾ ಸಮುದಾಯದ ಮುಖಂಡರು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ನಮ್ಮ ಬೆಂಬಲ ಇರುವುದನ್ನು ಮನದಟ್ಟು ಮಾಡಿಸಿದ್ದೇವೆ. ಆದರೂ ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಭಯಾನಕ ಅಪಪ್ರಚಾರ ಮಾಡುತ್ತದೆ. ಸುಳ್ಳುಗಳ ಹೊರತಾಗಿ ಬಿಜೆಪಿಗೆ ಬೇರೆ ಬಂಡವಾಳ ಇಲ್ಲ.

*ಮೂರೂ ಕ್ಷೇತ್ರಗಳ ಉಪಚುನಾವಣೆ ಬಹಳ ಮಹತ್ವದ್ದಾಗಿದ್ದು ನಾವು ಮೂರನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ತಾವು ವಹಿಸಿಕೊಂಡ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.

Prev Post ಚನ್ನಪಟ್ಟಣ ಟಿಕೆಟ್; ಮಂಗಳವಾರ ಅಥವಾ ಬುಧವಾರ ಫೈನಲ್ ಎಂದ HD ಕುಮಾರಸ್ವಾಮಿ
Next Post ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದಿಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.