Font size:
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರು, ಮುಖಂಡರ ಸಭೆಯನ್ನು ಮಾಜಿ ಪ್ರಧಾನಿಗಳಾದ ಶ್ರೀ HD ದೇವೇಗೌಡರು ಉದ್ಘಾಟನೆ ನೆರವೇರಿಸಿದರು.
ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀ HD ಕುಮಾರಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು, ಮಾಜಿ ಸಚಿವ ಸಾ.ರಾ.ಮಹೇಶ್, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ HM ರಮೇಶ್ ಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಸೇರಿದಂತೆ ಅನೇಕ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.






