Font size:
ಮಾಜಿ ಸಚಿವ, ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಅವರು ಪಕ್ಷ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮಾಜಿ ಸಚಿವ, ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಅವರು ಪಕ್ಷ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಡಾ. ಎಂ ಸಿ ಸುಧಾಕರ್, ಮಾಜಿ ಸಂಸದ ಡಿ ಕೆ ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ. ಜಿ.ಸಿ. ಚಂದ್ರಶೇಖರ್, ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಶಾಸಕರಾದ ಮಾಗಡಿ ಬಾಲಕೃಷ್ಣ, ಡಾ ರಂಗನಾಥ್, ಕದಲೂರು ವಿಜಯ್, ರವಿ ಗಣಿಗ, ಪೊನ್ನಣ್ಣ, ಎಂಎಲ್ಸಿಗಳಾದ ಪುಟ್ಟಣ್ಣ, ನಜೀರ್ ಅಹ್ಮದ್, ದಿನೇಶ್ ಗೂಳಿಗೌಡ ಮತ್ತಿತರರು ಉಪಸ್ಥಿತರಿದ್ದರು.






