👆ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಬಾಬುಸಾ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

Bangalore:

Font size:

👆ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಬಾಬುಸಾ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘಟನೆಯಲ್ಲಿ ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ ಮುಖ್ಯಮಂತ್ರಿ ಸಿದ್ದರಾಮಯ್ಯ

👆ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಬಾಬುಸಾ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.

ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು.

ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ‌ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಸಿಎಂ ಸೂಚನೆ ನೀಡಿದರು.

ಸಚಿವ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಶಾಸಕ ಬೈರತಿ ಬಸವರಾಜ್ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

👇ಘಟನಾ ಸ್ಥಳ ಪರಿಶೀಲನೆ ಬಳಿಕ‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಬೆಂಗಳೂರು : ನಗರದ ಬಾಬು ಸಾ ಪಾಳ್ಯದಲ್ಲಿ ಕಟ್ಟಡ ಕುಸಿತದಿಂದ ಮೃತಪಟ್ಟ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಬೇಟಿ ಕೊಟ್ಟ ಅವರು, ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಕೊಟ್ಟ ಐಎಎಸ್‌ ಅಧಿಕಾರಿ ವಲಯ ಆಯುಕ್ತ, ಕಾರ್ಯಪಾಲಕ ಎಂಜಿನಿಯರ್‌ ಅವರಿಗೆ ನೋಟಿಸ್‌ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರಿಗೆ ಸೂಚಿಸಿದರು. ಈಗಾಗಲೇ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಅಮಾನತು ಮಾಡಲಾಗಿದೆ ಎಂದು ಹೇಳಿದರು.

ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.

ಬಿಬಿಎಂಪಿಯಿಂದ ತಲಾ ₹2 ಲಕ್ಷ ಹಾಗೂ ಕಾರ್ಮಿಕ ಇಲಾಖೆಯಿಂದ ತಲಾ ₹3 ಲಕ್ಷ ಪರಿಹಾರವನ್ನು ಮೃತರ ಕುಟುಂಬಕ್ಕೆ ನೀಡಬೇಕು ಎಂದು ಘೋಷಿಸಿದರು. ಕಟ್ಟಡ ಕುಸಿತದಲ್ಲಿ ಗಾಯಗೊಂಡವರ ಸಂರ್ಪೂಣ ಚಿಕಿತ್ಸಾ ವೆಚ್ಚವನ್ನು ಇಲಾಖೆಗಳಿದಂಲೇ ಭರಿಸಬೇಕು ಎಂದು ಆಗ್ರಹಿಸಿದರು.

ಘಟನಾ ಸ್ಥಳ ಪರಿಶೀಲನೆ ಬಳಿಕ‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಸಚಿವ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಶಾಸಕ ಬೈರತಿ ಬಸವರಾಜ್ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Prev Post ಕಿತ್ತೂರು ಉತ್ಸವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಣಗಾನ
Next Post ರಿಸಲ್ಟ್ ನೋಡ್ತೀನಿ: ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಯಾರಲ್ಲೂ ಅಸಮಾಧಾನವಿಲ್ಲ: ಎಂದು ಡಿಸಿಎಂ ಡಿ.ಕೆ. ಶಿವಕುಮಾರ್