ರಿಸಲ್ಟ್ ನೋಡ್ತೀನಿ: ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಯಾರಲ್ಲೂ ಅಸಮಾಧಾನವಿಲ್ಲ: ಎಂದು ಡಿಸಿಎಂ ಡಿ.ಕೆ. ಶಿವಕುಮಾರ್

chennapatna:

Font size:

ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ‌ ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ

ರಿಸಲ್ಟ್ ನೋಡ್ತೀನಿ: ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ
ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಯಾರಲ್ಲೂ ಅಸಮಾಧಾನವಿಲ್ಲ: ಎಂದು ಡಿಸಿಎಂ ಡಿ.ಕೆ. ಶಿವಕುಮಾರ್

ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ‌
ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ

ಚನ್ನಪಟ್ಟಣ ಅ 24: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಯೋಗೀಶ್ವರ್ ಪರ ರೋಡ್ ಶೋ ನಲ್ಲಿ‌ ಭಾಗವಹಿಸಿ ಚನ್ನಪಟ್ಟಣ ಜನತೆಗೆ ಕರೆ ನೀಡಿದರು.

ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಜನಕಲ್ಯಾಣದ ಸರ್ಕಾರದಲ್ಲಿ ಯೋಗೀಶ್ವರ್ ಇರ್ತಾರೆ

ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೀಶ್ವರ್ ಅವರು ಇರಬೇಕು. ಹೆಚ್.ಡಿ.ಕುಮಾರಸ್ವಾಮಿಯವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೀಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಯಾರಲ್ಲೂ ಅಸಮಾಧಾನವಿಲ್ಲ: ಎಂದು ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಅ.24

“ಚನ್ನಪಟ್ಟಣ ಅಭ್ಯರ್ಥಿ ವಿಚಾರವಾಗಿ ಪಕ್ಷದ ಯಾವುದೇ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನದ ಬಗ್ಗೆ ಕೇಳಿದಾಗ, “ಯಾರಲ್ಲೂ ಅಸಮಾಧಾನವಿಲ್ಲ. ಕೆಲವರು ಡಿ.ಕೆ. ಸುರೇಶ್ ಸ್ಪರ್ಧಿಸಬೇಕು ಎಂದು ಆಸೆಪಟ್ಟಿದ್ದರು. ಆದರೆ ಈಗ ಅಸಮಾಧಾನವಿಲ್ಲ. ಸುರೇಶ್ ಅವರೇ ಜವಾಬ್ದಾರಿ ವಹಿಸಿದ್ದು, ಅವರೇ ಅಭ್ಯರ್ಥಿಯನ್ನು ಮೊದಲು ಭೇಟಿ ಮಾಡಿದ್ದಾರೆ. ಪಕ್ಷದ ಹಿತದಿಂದ ನಾವು ಈ ತೀರ್ಮಾನ ಮಾಡಿದ್ದೇವೆ” ಎಂದು ತಿಳಿಸಿದರು.

“ನಾನು ಹಾಗೂ ಮುಖ್ಯಮಂತ್ರಿ ಗಳು ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸುತ್ತೇವೆ. ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ಇನ್ನು ಮಾಹಿತಿ ಬಂದಿಲ್ಲ. ಮಾಹಿತಿ ಬಂದ ತಕ್ಷಣ ನಾವು ಪ್ರಕಟಿಸುತ್ತೇವೆ. ಆಂತರಿಕ ಸಮೀಕ್ಷೆ ನಡೆಯುತ್ತಿದೆ. ಕೆಲವರ ಅಭಿಪ್ರಾಯ ಪಡೆಯಲಾಗುತ್ತಿದೆ. ರಾಜಕೀಯವಾಗಿ ನಮಗೆ ಲಾಭವಾಗುವ ಅಂಶಗಳನ್ನು ನೋಡುತ್ತಿದ್ದೇವೆ” ಎಂದು ತಿಳಿಸಿದರು.

Prev Post 👆ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಬಾಬುಸಾ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Next Post ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿ ಕುಂಠಿತ: ಉಪ ಲೋಕಾಯುಕ್ತ ಫಣೀಂದ್ರ