ಭಾರತದ ಘನತೆವೆತ್ತ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಕರ್ನಾಟಕ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮನ – ಗೌರವಾನ್ವಿತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಸ್ವಾಗತ

BANGALURU:

Font size:

ಭಾರತದ ಘನತೆವೆತ್ತ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಕರ್ನಾಟಕ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮನ – ಗೌರವಾನ್ವಿತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಸ್ವಾಗತ

ಬೆಂಗಳೂರು, ಅ. 25 -ಭಾರತದ ಘನತೆವೆತ್ತ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಶ್ರೀಮತಿ ಸುದೇಶ್ ಧನಕರ್ ಅವರು ಕರ್ನಾಟಕ ಪ್ರವಾಸಕ್ಕಾಗಿ ಇಂದು ಇಂದು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು

ಭಾರತದ ಘನತೆವೆತ್ತ ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ಶ್ರೀಮತಿ ಸುದೇಶ್ ಧನಕರ್ ಅವರನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯ ಸ್ವಾಗತಿಸಿದರು.

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿಗಳು ನಂತರ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಮಂಡ್ಯ ಜಿಲ್ಲೆಯ ನಾಗಮಂಗಲದ ಬಿ.ಜಿ. ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಸಲುವಾಗಿ ಆದಿಚುಂಚನಗಿರಿಗೆ ಪ್ರಯಾಣ ಕೈಗೊಂಡರು.

ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಸತ್ಯವತಿ ಜಿ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯನಂದ ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Prev Post ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
Next Post ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ