Font size:
👇ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕಾಗಿ ಕಿತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚನ್ನಮ್ಮ ವೃತ್ತದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
👇ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕಾಗಿ
ಮಡಿವಾಳ ರಾಜ ಯೋಗೀಂದ್ರ ಸ್ವಾಮೀಜಿ ಕಲ್ಮಠ, ನಿಚ್ಚಣಿಕೆಯ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಗಳು, ಕೂಡಲ ಸಂಗಮದ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ವಹಿಸಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಮುಖ್ಯ ಸಚೇತಕರಾದ ಅಶೋಕ ಮ.ಪಟ್ಟಣ, ಶಾಸಕರಾದ ಮಹಂತೇಶ ಕೌಜಲಗಿ, ಪ್ರಕಾಶ ಬಾ ಹುಕ್ಕೇರಿ, ಭರಮಗೌಡ ಕಾಗೆ, ವಿಶ್ವಾಸ್ ವೈದ್ಯ, ಆಸಿಫ್ ಸೇಠ್, ಬುಡಾ ಅಧ್ಯಕ್ಷರಾದ ಲಕ್ಷ್ಮಣ್ ರಾವ್ ಜಿಂಗಳೆ , ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.






