*ಸುವರ್ಣ ಭಾರತೀ ನಮ: ಶಿವಾಯ ಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಡಾ. ಸುದೇಶ್ ಧನಕರ್
ಬೆಂಗಳೂರು, ಅ.26 -
ಸುವರ್ಣ ಭಾರತೀ ,ಶೃಂಗೇರಿ, ವೇದಾಂತಭಾರತೀ ವತಿಯಿಂದ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾಪೀಠಾಧೀಶ್ವರರಾದ ಜಗದ್ಗುರು ಶಂಕರಾಚಾರ್ಯ ಪರಮಪೂಜ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಸಂನ್ಯಾಸಸ್ವೀಕಾರದ ಸುವರ್ಣ ಮಹೋತ್ಸವ ನಿಮಿತ್ತ ಅರಮನೆ ಮೈದಾನದಲ್ಲಿ ಇಂದು ಹಮ್ಮಿಕೊಳ್ಳಲಾದ ಸುವರ್ಣ ಭಾರತೀ ನಮ: ಶಿವಾಯ ಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ ಕರ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್,ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿ.ಸೋಮಣ್ಣ,
ಸದ್ಗುರು ಶಂಕರಾಚಾರ್ಯ ಪರಮಪೂಜ್ಯ ಶ್ರೀಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು , ಪೀಠಾಧೀಶರು, ದಕ್ಷಿಣಾಮ್ನಾಯ ಶ್ರೀ ಶಾರದಾಪೀಠ,
ಕೃಷ್ಣರಾಜನಗರ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠಾಧೀಶರಾದ ಪರಮಪೂಜ್ಯ ಶ್ರೀಶ್ರೀ ಶಂಕರಭಾರತೀ ಮಹಾಸ್ವಾಮಿಗಳವರು,
ತತ್ಕರಕಮಲಸಂಜಾತರಾದ ಪರಮಪೂಜ್ಯ ಶ್ರೀಶ್ರೀ ಬ್ರಹ್ಮಾನಂದಭಾರತೀ ಸ್ವಾಮಿಗಳವರು, ಕುಲಪತಿಗಳು, ಎಂ.ಎಸ್. ರಾಮಯ್ಯ ವಿಶ್ವವಿದ್ಯಾಲಯ ಡಾ. ಎಂ.ಆರ್. ಜಯರಾಮ್ ,ಬಿ.ಸಿ. ಪ್ರಭಾಕರ್ ಹಿರಿಯ ನ್ಯಾಯವಾದಿಗಳು,
ಹಾಗೂ ವೇದಾಂತಭಾರತಿಯ ಟ್ರಸ್ಟಿಗಳು ಮತ್ತು ಸಂಚಾಲನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು






