ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸದಲ್ಲಿರುವ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ಭಾರತದ ರಾಯಭಾರಿ, ಹಿರಿಯ ಭಾರತೀಯ ಆಡಳಿತ ಸೇವೆಯ ಅಧಿಕಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು
ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸದಲ್ಲಿರುವ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ಭಾರತದ ರಾಯಭಾರಿ, ಹಿರಿಯ ಭಾರತೀಯ ಆಡಳಿತ ಸೇವೆಯ ಅಧಿಕಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ. ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ, ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು, ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು.
ಇದೇ ವೇಳೆ, ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‌ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು. ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ, ಈ ಭೇಟಿಯು ಫಲಪ್ರದವಾಗಿದ್ದು, ವಿಶೇವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.






