Font size:
ಹಾಸನದ ಶ್ರೀ ಹಾಸನಾಂಬಾ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಮಾಜಿ ಮಖ್ಯ ಮಂತ್ರಿ ಬಿಎಸ್.ಯಡಿಯೂರಪ್ಪ
ವರ್ಷಕ್ಕೊಮ್ಮೆ ದರ್ಶನ ಭಾಗ್ಯ ನೀಡುವ ಹಾಸನದ ಶ್ರೀ ಹಾಸನಾಂಬಾ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ತಾಯಿಯ ಹಾಗೂ ಸಿದ್ದೇಶ್ವರ ಸ್ವಾಮಿಯವರ ದರ್ಶನಾಶೀರ್ವಾದ ಪಡೆಯಲಾಯಿತು. ಶಕ್ತಿದೇವರ ಅನುಗ್ರಹ ಎಲ್ಲರ ಮೇಲಿರಲೆಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್ ಜಿ ಗೌಡ ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕ ಶ್ರೀ ಸಿಮೆಂಟ್ ರಾಜು ಶಾಸಕರಾದ ಶ್ರೀ ಹೆಚ್.ಕೆ.ಸುರೇಶ್, ಜಿಲ್ಲಾಧ್ಯಕ್ಷರಾದ ಶ್ರೀ ಸಿದ್ದೇಶ್ ನಾಗೇಂದ್ರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






