ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್

udupi:

Font size:

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ದೀಪಾವಳಿ ಹಬ್ಬದ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದರು.

ಈ ವೇಳೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತಿ ಸಿಇಒ ಪ್ರತೀಕ್ ಬಯಲ್, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್ ಉಪಸ್ಥಿತರಿದ್ದರು.

Prev Post ಜಮೀನು ಕಬಳಿಸುತ್ತಿರುವ ವಕ್ಫ್ ವಿರುದ್ಧ ನವೆಂಬರ್ 4 ರಿಂದ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ
Next Post ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದ್ವಜಾರೋಹಣ