ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Mangalore:

Font size:

ಮಂಗಳೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ನ.15ರ ಶುಕ್ರವಾರ ಸುಬ್ರಮಣ್ಯ ಸಮೀಪದ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ.

from : Jayaram Udupi

ಮಂಗಳೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ನ.15ರ ಶುಕ್ರವಾರ ಸುಬ್ರಮಣ್ಯ ಸಮೀಪದ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ. ಶುಕ್ರವಾರ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಮಾಡ ಮೈದಾನದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ವೇದಿಕೆ ಸಂಚಾಲಕ ಕಿಶೋ‌ರ್ ಶಿರಾಡಿ ಅವರ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆದಿತ್ತು. ಪ್ರತಿಭಟನಾ ಸಭೆಯಲ್ಲಿದ್ದವರು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಪ್ರತಿಭಟನಾ ಸಭೆಯ ಸ್ಥಳದಿಂದ ಸುಮಾರು 1 ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಪೇಟೆಗೆ ಬಂದು ಮದ್ಯಾಹ್ನ 2.30 ಗಂಟೆಗೆ ರಸ್ತೆತಡೆಯನ್ನು ಪ್ರಾರಂಭಿಸಿದ್ದು ರಸ್ತೆಯ ಮಧ್ಯದಲ್ಲಿಯೇ ಶಾಸಕರಾದ ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಪ್ರತಿಭಟನಾಕಾರರಾದ ಸುಧೀರ್ ಶೆಟ್ಟಿ, ನವೀನ್ ನೆರಿಯಾ, ಸತೀಶ್ ಶೆಟ್ಟಿ ಬಲ್ಯ, ಉಮೇಶ್ ಸಾಯಿರಾಮ್, ವೆಂಕಟ ಒಳಲಂಬೆ, ಪ್ರಕಾಶ್ ಗುಂಡ್ಯ, ಪ್ರಸಾದ್ ನೆಟ್ಟಣ, ಸೈಯದ್ ಮೀರಾ ಸಾಹೇಬ್, ಉಮೇಶ್ ಬಲ್ಯ, ನವೀನ್ ರೆಖ್ಯಾ, ಯತೀಶ್ ಗುಂಡ್ಯ, ಗಣೇಶ್ ಅನಿಲ ಮತ್ತು ಇತರರು ರಸ್ತೆ ತಡೆ ಮಾಡಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ಮಾಡದಂತೆ ಹಾಗೂ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸದಂತೆ ತಿಳಿಸಿದರೂ ಇವರು ಕೇಳದೆ ಪ್ರತಿಭಟನೆ ಮುಂದುವರಿಸಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸರ್ಕಾರ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.
ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವುದು ಕಾನೂನು ಬಾಹಿರ ಎಂದು ತಿಳಿಸಿದರೂ ಗಣನೆಗೆ ತೆಗೆದುಕೊಳ್ಳದೆ ಮಧ್ಯಾಹ್ನ 3.30 ಗಂಟೆಯ ತನಕ ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿರುತ್ತಾರೆ ಎಂದು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಪ್ರತಿಭಟನಾಕಾರರರಿಂದ ಮನವಿ ಸ್ವೀಕರಿಸಲು ಹಿರಿಯ ಅಧಿಕಾರಿಗಳು ಆಗಮಿಸುವುದು ವಿಳಂಬವಾದ ಹಿನ್ನೆಲೆ ಆಕ್ರೋಶಗೊಂಡ ಪ್ರತಿಭಟನಾಕಾರರು ಗುಂಡ್ಯ ಜಂಕ್ಷನ್ ಗೆ ಆಗಮಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತು ಹೆದ್ದಾರಿ ತಡೆ ನಡೆಸಿದ ಘಟನೆ ನಡೆದಿತ್ತು. ಬಳಿಕ ಪುತ್ತೂರು ಸಹಾಯಕ ಆಯುಕ್ತರು ಆಗಮಿಸಿ ಮನವಿ ಸ್ವೀಕರಿಸಿದ ಬಳಿಕ ಹೆದ್ದಾರಿ ತಡೆ ಕೈ ಬಿಡಲಾಗಿತ್ತು.

Prev Post ಮಂಗಳೂರು ವಿಶ್ವವಿದ್ಯಾಲಯ ಅವ್ಯವಸ್ಥೆ ವಿರುದ್ದ ಪ್ರತಿಭಟನೆ
Next Post “ಕೊಡವ ಸಂಸ್ಕøತಿಯ ವೈಭವ ಮರುಕಳುಹಿಸುವಂತಾಗಬೇಕು” – ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ