ರಾಷ್ಟ್ರೀಯ ಪತ್ರಿಕಾ ದಿನಾಚರಣೆ: ಬದಲಾಗುತ್ತಿರುವ ಪತ್ರಿಕಾ ಮಾಧ್ಯಮದ ಸ್ವರೂಪ” ವಿಷಯದ ಕುರಿತು ವಿಚಾರ ಸಂಕಿರಣ ಉದ್ಘಾಟನೆ ಮಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

BANGALURU:

Font size:

ರಾಷ್ಟ್ರೀಯ ಪತ್ರಿಕಾ ದಿನಾಚರಣೆ: ಬದಲಾಗುತ್ತಿರುವ ಪತ್ರಿಕಾ ಮಾಧ್ಯಮದ ಸ್ವರೂಪ” ವಿಷಯದ ಕುರಿತು ವಿಚಾರ ಸಂಕಿರಣ ಉದ್ಘಾಟನೆ ಮಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

ಬೆಂಗಳೂರು, ನ. 16 -

ಭಾರತೀಯ ಪತ್ರಿಕಾ ಮಂಡಳಿಯ ಸ್ಥಾಪನೆಯ ಸ್ಮರಣಾರ್ಥ ಪ್ರತಿ ವರ್ಷ ನವೆಂಬರ್‌ 16 ರಂದು ದೇಶದಾದ್ಯಂತ ರಾಷ್ಟ್ರೀಯ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ

ಇಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ “ಬದಲಾಗುತ್ತಿರುವ ಪತ್ರಿಕಾ ಮಾಧ್ಯಮದ ಸ್ವರೂಪ” ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ವಾರ್ತಾ ಇಲಾಖೆಯ ಸುಲೋಚನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರು ಮಾಡಿದರು.

ಕಾರ್ಯಕ್ರಮದಲ್ಲಿ ಅಜೀಂ ಪ್ರೇಂಜಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಎ. ನಾರಾಯಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ಉಪಸ್ಥಿತರಿದ್ದರು

Prev Post ಆಸ್ಟ್ರೇಲಿಯಾ ವೆಸ್ಟ್ ಸಿಡ್ನಿ ವಿವಿಯಿಂದ ಬೆಂಗಳೂರಿನಲ್ಲಿ ಕೃಷಿ ವಿವಿ ಆರಂಭಿಸಲು ಉದ್ದೇಶ
Next Post ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ: ಸಿ.ಎಂ.ಸಿದ್ದರಾಮಯ್ಯ