ಜೆಡಿಎಸ್ ಕಾರ್ಯಕರ್ತ ಹಾಗೂ ತಮ್ಮ ಅಭಿಮಾನಿ ಆಗಿರುವ ಶ್ರೀ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

chennapatna:

Font size:

ಜೆಡಿಎಸ್ ಕಾರ್ಯಕರ್ತ ಹಾಗೂ ತಮ್ಮ ಅಭಿಮಾನಿ ಆಗಿರುವ ಶ್ರೀ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ಪಂಚಾಯಿತಿಯ ಶ್ರೀರಾಂಪುರ ಗ್ರಾಮದ ಜೆಡಿಎಸ್ ಕಾರ್ಯಕರ್ತ ಹಾಗೂ ತಮ್ಮ ಅಭಿಮಾನಿ ಆಗಿರುವ ಶ್ರೀ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

|| ಶ್ರೀ ರಾಂಪುರ ಗ್ರಾಮದ ಮಂಜುನಾಥ್ ಅವರನ್ನ ಭೇಟಿ ಮಾಡಿ,ಧೈರ್ಯ ಹೇಳಿದ ನಿಖಿಲ್||

| ಸೋಲು ಗೆಲುವು ಸಾಮಾನ್ಯ, ಯಾರು ಧೃತಿಗೆಡಬಾರದು ಕಾರ್ಯಕರ್ತರಿಗೆ ನಿಖಿಲ್ ಮನವಿ|

*

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ಪಂಚಾಯಿತಿಯ ಶ್ರೀರಾಂಪುರ ಗ್ರಾಮದ ಜೆಡಿಎಸ್ ಕಾರ್ಯಕರ್ತ ಹಾಗೂ ಅಭಿಮಾನಿ ಆಗಿರುವ ಶ್ರೀ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಹಾಗೆಯೇ ಯುವಕನ ಕುಟುಂಬಕ್ಕೆ ಧೈರ್ಯ ಹೇಳಿದರು ಹಾಗೂ ಇನ್ನೆಂದೂ ಇಂಥ ದುಡುಕಿನ ನಿರ್ಧಾರ ಮಾಡಬೇಡ ಯುವಕನಿಗೆ ಕಿವಿಮಾತು ಹೇಳಿದರು. ಚುನಾವಣೆ ಎಂದ ಮೇಲೆ ಸೋಲು ಗೆಲುವು ಸಾಮಾನ್ಯ. ಸೋಲೇ ಗೆಲುವಿನ ಮೆಟ್ಟಿಲು. ಹೀಗಾಗಿ ಯಾರೂ ಧೃತಿಗೆಡಬಾರದು ಎಂದು ಕಾರ್ಯಕರ್ತರಿಗೆ ನಿಖಿಲ್ ಅವರು ಮನವಿ ಮಾಡಿದರು.

ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿ ಎಲ್ಲರೂ ಪಕ್ಷದ ಜತೆ ನಿಂತು ಕೆಲಸ ಮಾಡೋಣ, ಹೋರಾಟ ಮಾಡೋಣ. ನಾನು ಸೋತಿದ್ದೇನೆ ಎಂದು ಮನೆಯಲ್ಲಿ ಕುರುವುದಿಲ್ಲ, ಎದೆಗುಂದುವುದಿಲ್ಲ ನಿಮ್ಮ ಜತೆ ನಾನು ಇರ್ತೀನಿ, ಪಕ್ಷ ಇರುತ್ತೆ ಯಾರು ಕೂಡ ಧೃತಿಗೆಡಬಾರದು ಎಂದರು.

ಮನೆಗೆ ಆಧಾರವಾಗಿದ್ದ ಮಂಜುನಾಥ್ ಅವರು ಈ ರೀತಿ ಮಾಡಿಕೊಂಡಿದ್ದಕ್ಕೆ ಬಹಳ ಬೇಸರವಾಯಿತು.ಈ ತರ ಮಾಡಿಕೊಳ್ಳ ಬೇಡಿ ನಿಮ್ಮ ಜತೆ ನಾನಿರುತ್ತೇನೆ, ಎರಡು ಮಕ್ಳಳಿವೆ ಮನಸ್ಸು ಧೃತಿಗೆಡ ಬೇಡಿ ನಿಮ್ಮ ಜತೆ ಇರ್ತೇನೆ, ತಾಲ್ಲೂಕಿನಲ್ಲಿ ದೇವೇಗೌಡರು ಹಾಗೂ ಕುಮಾರಣ್ಣ ಮತ್ತು ಪಕ್ಷದ ಮೇಲೆ ಕಾರ್ಯಕರ್ತರು ಪ್ರಾಣ ಇಟ್ಟುಕೊಂಡಿದ್ದಾರೆ. ಯಾರು ಧೈರ್ಯ ಕಳೆದುಕೊಳ್ಳಬೇಡಿ ಎಂದು ನಿಖಿಲ್ ಅವರು ಮನವಿ ಮಾಡಿದರು.

ಇದೇ ವೇಳೆ ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಜಯಮುತ್ತು, ಮುಖಂಡರಾದ ಕುಕ್ಕೂರ ದೊಡ್ಡಿ ಜಯರಾಮ್ ಸೇರಿದಂತೆ ಅನೇಕ ಸ್ಥಳೀಯ ಮುಖಂಡರು ನನ್ನ ಜತೆಯಲ್ಲಿದ್ದರು.

Prev Post ದೇಸಿ ಗೋವುಗಳಿಗೆ ಬಾಳೆಹಣ್ಣು-ಬೆಲ್ಲ ತಿನಿಸಿ ಗೋಪ್ರೇಮ ಮೆರೆದ ಕೇಂದ್ರ ಸಚಿವ ಜೋಶಿ
Next Post ಉಪಚುನಾವಣೆಯ ಫಲಿತಾಂಶ ಕ್ಲೀನ್‌ ಚಿಟ್‌ ಅಲ್ಲ, ಸಿಎಂ ಸಿದ್ದರಾಮಯ್ಯನವರ ಲೂಟಿ ಪ್ರಕರಣ ನ್ಯಾಯಾಲಯದಲ್ಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ