Font size:
ಸಂವಿಧಾನ ದಿನಾಚರಣೆ ಸಮಾರಂಭ
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳಾದ ಕೆ.ಎಸ್ ಲತಾಕುಮಾರಿ ಅವರ ಅಧ್ಯಕ್ಷತೆಯಲ್ಲಿ *ಸಂವಿಧಾನ ದಿನಾಚರಣೆ ಸಮಾರಂಭ* ವನ್ನು ಹಮ್ಮಿಕೊಳ್ಳಲಾಯಿತು.
ಇದೇ ಸಂದರ್ಭದಲ್ಲಿ ಯಲಹಂಕ ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳ 118 ಸಿಬ್ಬಂದಿ ವರ್ಗದವರಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಪೂರ್ವಾನುಮೋದನೆ ನೀಡಿರುವ ಆದೇಶ ಪ್ರತಿಗಳನ್ನು ನೀಡಲಾಯಿತು.
ಸಮಾರಂಭದಲ್ಲಿ ಉಪ ಕಾರ್ಯದರ್ಶಿಗಳಾದ ಅನಿತಾ, ಮುಖ್ಯ ಲೆಕ್ಕಾಧಿಕಾರಿಗಳಾದ ಲಲಿತ, ಯೋಜನಾ ನಿರ್ದೇಶಕರಾದ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಸಿದ್ದರಾಮಣ್ಣ ಸೇರಿದಂತೆ ಜಿಲ್ಲಾ ಮತ್ತು ಯಲಹಂಕ ತಾಲ್ಲೂಕು ಪಂಚಾಯಿತಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.






