ಅಂತಾರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಭಾಗಿ

:

Font size:

ಅಂತಾರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಭಾಗಿ

*ಅಂತಾರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಭಾಗಿ*

ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ರೋಮ್ ನ ವ್ಯಾಟಿಕನ್ ಸಿಟಿಯಲ್ಲಿ ನಡದ ಅಂತರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಭಾಷಣದ ಮೂಲಕ ಧರ್ಮದ ಕುರಿತು ತಮ್ಮ ನಿಲುವನ್ನು ಮಂಡಿಸಿದರು.

ಅದಕ್ಕೂ ಮುಂಚಿತವಾಗಿ ವಿಶ್ವ ಕ್ಯಾಥಲಿಕ್ ಸಮುದಾಯದ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರನ್ನು ವ್ಯಾಟಿಕನ್ ಸಿಟಿಯಲ್ಲಿ ಭೇಟಿ ಮಾಡಿದ, ಸಭಾಧ್ಯಕ್ಷರು, ಮಾತುಕತೆ ನಡೆಸಿದರು.

ಶ್ರೀ ನಾರಾಯಣ ಗುರುಗಳು ಮೊದಲ ಅಂತಾರಾಷ್ಟ್ರೀಯ ಸರ್ವಧರ್ಮ ಸಮ್ಮೇಳನವನ್ನು ಆಯೋಜಿಸಿ ಶತಮಾನೋತ್ಸವ ಸಂದ ಸ್ಮರಣಾರ್ಥ ಈ ಸಮ್ಮೇಳನವನ್ನು ವ್ಯಾಟಿಕನ್ ಸಿಟಿಯ ಆಗಸ್ತಿನ್ಯೇನಮ್ ನಲ್ಲಿ ಆಯೋಜಿಸಲಾಗಿದೆ. "ಮಾನವೀಯತೆಗಾಗಿ ಧರ್ಮಗಳ ಒಗ್ಗಟ್ಟು" ಎಂಬ ವಿಷಯದಲ್ಲಿ ನಡೆಯುವ ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ವಿಶ್ವಾದ್ಯಂತ ಇರುವ ವಿವಿಧ ಧರ್ಮಗಳ ಗಣ್ಯರು ಭಾಗವಹಿಸಿದ್ಧರು.

ಈ ಸಮಾರಂಭದಲ್ಲಿ ಭಾಗವಹಿಸಲು ಸಭಾಧ್ಯಕ್ಷರು ನವೆಂಬರ್ 29 ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟಿದ್ದು, ಡಿಸೆಂಬರ್ 2 ರಂದು ಕೇರಳದ ಕಲ್ಲಿಕೋಟೆ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

Prev Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಹಬ್ಬದ ಅಂಗವಾಗಿ ವಿಧಾನಸೌಧ‌ ಮುಂಭಾಗದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ "ನಮ್ಮ ಜಾತ್ರೆ" ಕಾರ್ಯಕ್ರಮದ ರಥಯಾತ್ರೆ ಮತ್ತು ಜನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು.‌
Next Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಪ್ರಯುಕ್ತ ಅವರ ಪ್ರತಿಮೆಗೆ ಮಾಪಾರ್ಪಣೆ ಮಾಡಿದರು