ಮಂಗಳೂರು ಫೆಂಗಲ್ ಚಂಡ ಮಾರುತದ ಆರ್ಭಟ : ನಾಳೆ ಶಾಲಾ,ಪಿಯು ಕಾಲೇಜು ಗಳಿಗೆ ರಜೆ

Mangalore:

Font size:

ಮಂಗಳೂರು ಫೆಂಗಲ್ ಚಂಡ ಮಾರುತದ ಆರ್ಭಟ : ನಾಳೆ ಶಾಲಾ,ಪಿಯು ಕಾಲೇಜು ಗಳಿಗೆ ರಜೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚ್ಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ದಿನಾಂಕ 2-12-2024 ರಿಂದ 3-12-2024 ರವಗೆ ಗುಡುಗು ಸಹಿತ ಬಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ,ಸರ್ಕಾರಿ ಅನುದಾನಿತ ಮತ್ತು ಪ್ರಾಥಮಿಕ ,ಪ್ರೌಢಶಾಲೆ ,ಪದವಿ ಪೂರ್ವ ಕಾಲೇಜು ಪಿಯು ಸಿ ವರೆಗೆ ರಜೆಯನ್ನು ಜಿಲ್ಲಾಧಿಕಾರಿಯವರು ಘೋಷಿಸಿದ್ದಾರೆ .

ಕಾಸರಗೋಡು ಜಿಲ್ಲೆಯ ಹಲವು ಪ್ರದೇಶದ ತಗ್ಗು ಪ್ರದೇಶಗಳು ಮುಳುಗಿದ್ದು ಕೃತಕ ನೆರೆ ಸಂಭವಿಸಿದೆ. ನಾಳೆ ಅಂದ್ರೆ ಡಿಸೆಂಬರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರಾ,ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ. ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ.

ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಕೆ.ಇಂಬುಶೇಖರ್ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

*ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತ ಪರಿಣಾಮ ವಿಪರೀತ ಮಳೆ,ಮುಂಜಾಗೃತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈ ಗೊಳ್ಳಲು ಜಿಲಾಧಿಕಾರಿಗಳಿಗೆ ಸೂಚನೆ ನೀಡಿದ ಸಭಾಧ್ಯಕ್ಷ ಯು ಟಿ ಖಾದರ್*

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು ಟಿ ಖಾದರ್ NDRF ಮುಂತಾದ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು,ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ,ಸಾರ್ವಜನಿಕರ ಸಂಪರ್ಕದಲ್ಲಿದ್ದುಕೊಂಡು ಸಹಕರಿಸುವಂತೆ ಸಭಾಧ್ಯಕ್ಷರು ಸೂಚನೆ ನೀಡಿದ್ದು ಜನ ಸಾಮಾನ್ಯರೂ ಕೂಡಾ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

Prev Post ವಕ್ಫ್‌ ಮಂಡಳಿಯಿಂದ ಭೂ ಕಬಳಿಕೆ, ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಕಾರಣ: ಪ್ರತಿಪಕ್ಷ ನಾಯಕ ಆರ್‌.ಅಶೋಕ
Next Post ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆ: ಸಚಿವ ಎನ್‌ ಎಸ್‌ ಭೋಸರಾಜು