ನೆದರ್‌ಲ್ಯಾಂಡ್ಸ್‌ನ ಹೇಗ್‌ನಲ್ಲಿ ಇನ್ವೆಸ್ಟ್‌ ಕರ್ನಾಟಕ ರೋಡ್‌ಷೋ

ಹೇಗ್‌ (ನೆದರ್ಲ್ಯಾಂಡ್‌):

Font size:

ಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ಬೆಳೆಸಲು ನೆದರ್‌ಲ್ಯಾಂಡ್ಸ್‌ ಒಲವು: ಸಚಿವ ಎಂ. ಬಿ. ಪಾಟೀಲ

ಹೇಗ್‌ (ನೆದರ್ಲ್ಯಾಂಡ್‌):  ʼಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ಬೆಳೆಸಲು ನೆದರಲ್ಯಾಂಡ್ಸ್‌ನ ವಾಣಿಜ್ಯ ಹಾಗೂ ಕೈಗಾರಿಕಾ ಸಂಘಟನೆಗಳು ತೀವ್ರ ಆಸಕ್ತಿ ವ್ಯಕ್ತಪಡಿಸಿವೆʼ ಎಂದು ಬೇಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಿಗಳನ್ನು ಆಹ್ವಾನಿಸಲು ಯುರೋಪ್‌ ಪ್ರವಾಸದಲ್ಲಿ ಇರುವ ಸಚಿವ ಪಾಟೀಲ ಅವರ ನೇತೃತ್ವದಲ್ಲಿನ ಉನ್ನತ ಮಟ್ಟದ ನಿಯೋಗವು ತಮ್ಮನ್ನು ಭೇಟಿಯಾದ ಸಂದರ್ಭದಲ್ಲಿ  ವಿದೇಶ ಆರ್ಥಿಕ ಸಂಬಂಧಗಳ ಮಹಾನಿರ್ದೇಶಕ ಮೈಕಲ್‌ ಸ್ವೀರ್ಸ್‌ ಅವರು ವಾಣಿಜ್ಯ ಸಂಬಂಧ ಬೆಳೆಸಲು ಇಂಗಿತ ವ್ಯಕ್ತಪಡಿಸಿದ್ದಾರೆ.

ʼರಾಜ್ಯ ಸರ್ಕಾರದ ಜೊತೆ ವಾಣಿಜ್ಯ ಸಂಬಂಧ ಬೆಳೆಸಲು ನೆದರ್‌ಲ್ಯಾಂಡ್ಸ್‌ ತೋರಿಸಿರುವ ಇಂಗಿತವು ಅಲ್ಲಿನ ಉದ್ಯಮಿಗಳು ರಾಜ್ಯದಲ್ಲಿ ಹೊಸ ಬಂಡವಾಳ ಹೂಡಿಕೆ ಮಾಡುವುದರ ಸ್ಪಷ್ಟ ಸಂಕೇತವಾಗಿದೆ. ಪಾಲ್-ವಿ, ಫಿಲಿಪ್ಸ್, ಹೈನೆಕೆನ್, ಇನ್ನಾಟೆರಾ ನ್ಯಾನೊಸಿಸ್ಟಮ್ಸ್ ಮತ್ತು ಪೋರ್ಟ್ ಆಫ್ ರೋಟರ್‌ಡ್ಯಾಮ್ ಮತ್ತಿತರ ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿಸಿವೆʼ ಎಂದು ಪಾಟೀಲ ಅವರು ಹೇಳಿದ್ದಾರೆ.

ಇನ್ವೆಸ್ಟ್‌ ಕರ್ನಾಟಕದ ಅಂಗವಾಗಿ ಜಾಗತಿಕ ಉದ್ಯಮಿಗಳನ್ನು ಸಂಪರ್ಕಿಸಲು, ಹೂಡಿಕೆದಾರರನ್ನು ಆಹ್ವಾನಿಸಲು ರಾಜ್ಯ ಸರ್ಕಾರವು ನೆದರ್‌ಲ್ಯಾಂಡ್ಸ್‌ನ  ಹೇಗ್‌ನಲ್ಲಿ ಯಶಸ್ವಿಯಾಗಿ ರೋಡ್‌ಷೋ ನಡೆಸಿದೆ. ರೋಡ್‌ಷೋದಲ್ಲಿ ರಾಜ್ಯದ ನಿಯೋಗವು ನೆದರ್‌ಲ್ಯಾಂಡ್ಸ್‌ನ ಉದ್ದಿಮೆ ಪ್ರಮುಖರ  ಜೊತೆ ಸಮಾಲೋಚನೆ ನಡೆಸಿ, ಮುಂದಿನ ವರ್ಷದ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಆಹ್ವಾನ ನೀಡಿತು.

ನಾವೀನ್ಯತೆ, ಎಲೆಕ್ಟ್ರಾನಿಕ್ಸ್‌ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿ ಇರುವುದನ್ನು ರೋಡ್‌ಷೋದಲ್ಲಿ ವಿವರಿಸಲಾಗಿದೆ. ರಾಜ್ಯದಲ್ಲಿನ ಸದೃಢ ಮೂಲಸೌಲಭ್ಯಗಳು, ನಾವೀನ್ಯತೆ ಆಧಾರಿತ ಅರ್ಥವ್ಯವಸ್ಥೆ, ಹೂಡಿಕೆದಾರ ಸ್ನೇಹಿ ಕೈಗಾರಿಕಾ ನೀತಿಗಳು ನೆದರ್‌ಲ್ಯಾಂಡ್ಸ್‌ನ ವಾಣಿಜ್ಯ ಹಾಗೂ ಕೈಗಾರಿಕಾ ಸಂಘಟನೆಗಳ ಗಮನ ಸೆಳೆದಿವೆ.  
ನೆದರ್‌ಲ್ಯಾಂಡ್ಸ್‌ನಲ್ಲಿನ ಭಾರತದ ರಾಯಭಾರಿ ಕುಮಾರ್ ತುಹಿನ್ ಅವರು ರೋಡ್‌ಷೋದಲ್ಲಿ ಮಾತನಾಡಿ, ಬಂಡವಾಳ ಹೂಡಿಕೆಯ ಪ್ರಮುಖ ತಾಣವಾಗಿ  ಕರ್ನಾಟಕವು ವಿಶ್ವದ ಗಮನ ಸೆಳೆಯುತ್ತಿರುವುದನ್ನು ವಿವರಿಸಿದರು.

ಎಲೆಕ್ಟ್ರಾನಿಕ್ಸ್, ನವೀಕರಿಸಬಹುದಾದ ಇಂಧನ ಮತ್ತು ಸುಧಾರಿತ ತಯಾರಿಕೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ನೆದರ್‌ಲ್ಯಾಂಡ್ಸ್‌ನ ಕಂಪನಿಗಳಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶಗಳು ಇರುವುದರ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆ  ತ್ವರಿತಗೊಳಿಸಲು ವಿನ್ಯಾಸಗೊಳಿಸಲಾಗಿರುವ ಕ್ವಿನ್‌ ಸಿಟಿ ಯೋಜನೆ ಸೇರಿದಂತೆ ರಾಜ್ಯದ ದೂರದೃಷ್ಟಿಯ ಉಪಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಅವರು ಈ ಸಂದರ್ಭದಲ್ಲಿ ಇದ್ದರು.

ಬೆಂಗಳೂರು, ಡಿಸೆಂಬರ್ 3 : ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.


ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾoಗಣ ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ

ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ , ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದ್ದೇವೆ ಎಂದರು.

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ

ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ಮಾಹೆ 1000 ರೂ. ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿ ಪ್ರಸಕ್ತ ಸಾಲಿನಿಂದ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ ರೂ. 2 ಕೋಟಿ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ. ಇದಲ್ಲದೇ ಇನ್ನೂ 13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಅವಲಂಬಿತರಿಗೆ ನೀಡಲಾಗುವ ಮರಣ ಪರಿಹಾರ ನಿಧಿಯನ್ನು 2023ನೇ ಸಾಲಿನಲ್ಲಿ ರೂ. 50,000/- ದಿಂದ ಪರಿಷ್ಕರಿಸಿ ರೂ.1.00 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ‘ಸಿ’ ಮತ್ತು ‘ಡಿ’ ಸಮೂಹದ ಹುದ್ದೆಗಳಲ್ಲಿ ಶೇ.5 ಹಾಗೂ ‘ಎ’ ಮತ್ತು ‘ಬಿ’ ಹುದ್ದೆಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಅಲ್ಲದೇ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮತಿಯನ್ನು ರಚಿಸಲಾಗಿದ್ದು ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ವಿಕಲಚೇತನರ ಮಾಸಾಶನ ಹೆಚ್ಚಿಸಲು ಕೇಂದ್ರಕ್ಕೆ ಮನವಿ

ಸಾಮಾಜಿಕ ಸಬಲೀಕರಣಕ್ಕಾಗಿ ಸಹ ಶೇಕಡಾ 40 ರಿಂದ 74 ವಿಕಲಚೇತನರಿಗೆ ರೂ. 800/- ಹಾಗೂ 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ ರೂ. 1400/- ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ರೂ. 2000/- ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸರ್ಕಾರ ಬರೆಯಲು ಕ್ರಮ ಕೈಗೊಳ್ಳಲಿದೆ. ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದರು

Prev Post ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿ ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ
Next Post *ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು