ತಜ್ಞರ ವರದಿಯ ಆಧಾರದ ಮೇಲೆ ಗೇಟ್ ಗಳ ನಿರ್ವಹಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ:

Font size:

ಸೆಪ್ಟೆಂಬರ್ -22: ತಜ್ಞರ ವರದಿಯ ಆಧಾರದ ಮೇಲೆ ಗೇಟ್ ಗಳ ನಿರ್ವಹಣೆ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಸ್ಟ್ ಗೇಟ್ ಗಳ ಕಾಲಕಾಲಕ್ಕೆ ದುರಸ್ತಿ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು 50 ವರ್ಷಕ್ಕೆ ಗೇಟ್ ಗಳನ್ನು ಬದಲಿಸಬೇಕು. 70 ವರ್ಷಗಳಿಂದ ಗೇಟ್ ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಉತ್ತಮ ನಿರ್ವಹಣೆ ಮಾಡಿರುವುದರಿಂದ 70 ವರ್ಷ ಕೆಲಸ ಮಾಡಿದೆ. ಪ್ರಸ್ತುತ ತಜ್ಞರ ಸಮಿತಿ ರಚನೆಯಾಗಿದ್ದು ವರದಿ ನೀಡಬೇಕಿದೆ ಎಂದರು.

ಹಿಂಗಾರಿನ ಎರಡನೇ ಬೆಳೆಗೆ ನೀರು ಲಭ್ಯವಾಗಬಹುದು
ತುಂಗಭದ್ರ ಜಲಾಶಯ ಮತ್ತೆ ತುಂಬಿದೆ. 101.77 ಟಿ.ಎಂ.ಸಿ ನೀರು ಲಭ್ಯವಿದೆ. ಮುಂಗಾರು ಮತ್ತು ಹಿಂಗಾರು ಬಿತ್ತನೆಗೆ ನೀರು ಸಿಗಲಿದೆ.ಕೊಚ್ಚಿಹೋಗಿದ್ದ 19 ನೇ ಕ್ರಸ್ಟ್ ಗೇಟ್ ನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ , ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್ ಅವರು ಸ್ಥಳದಲ್ಲಿಯೇ ಇದ್ದು ಗೇಟ್ ದುರಸ್ತಿ ಗೆ ಕ್ರಮ ವಹಿಸಿದರು. ತಜ್ಞ ಕನ್ನಯ್ಯ ನಾಯ್ಡು ಅವರ ನೇತೃತ್ವದಲ್ಲಿ, ಜಿಂದಾಲ್, ನಾರಾಯಣ್ ಇಂಜಿನಿಯರಿಂಗ್ ಹಾಗೂ ಇಂಜಿನಿಯರ್ ಗಳು, ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಆದಷ್ಟು ತ್ವರಿತವಾಗಿ ಗೇಟ್ ಅಳವಡಿಸಲು ಸಾಧ್ಯವಾಯಿತು. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. 20 ಕ್ಕೂ ಹೆಚ್ಚು ಟಿ.ಎಂ.ಸಿ ನೀರು ಉಳಿಯಿತು. ಬೆಳೆ ಗೆ ನೀರು ಸಿಗುತ್ತದೋ ಇಲ್ಲವೋ ಎಂಬ ರೈತರ ಆತಂಕ ನಿವಾರಣೆಯಾಗಿದೆ. ಹಿಂಗಾರಿನ ಬೆಳೆಗೆ ಯಾವುದೇ ತೊಂದರೆ ಇಲ್ಲ. ಎರಡನೇ ಬೆಳೆಗೆ ನೀರು ಒದಗಿಸಲು ಪ್ರಯತ್ನಿಸಲಾಗುವುದು.101 ಟಿಎಂಸಿ ಲಭ್ಯವಿರುವುದರಿಂದ ನೀರು ಲಭ್ಯವಾಗಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Prev Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು.
Next Post ಲೆಕ್ಕದಲ್ಲಿ ಮತ್ತೆ ಗೆದ್ದ ಸಿಎಂ ಸಿದ್ದರಾಮಯ್ಯ