ವಿಧಾನ ಪರಿಷತ್ ಸಭಾಪತಿಯವರಾದ ಬಸವರಾಜ ಹೊರಟ್ಟಿ ಅವರು ಶನಿವಾರ(ಡಿ.7) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯ ಪ್ರಮುಖಾಂಶಗಳು.
* ಬೆಳಗಾವಿ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ.
* ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಚಿಂತನೆ ನಡೆಸಲು ಸಲಹೆ ನೀಡಲಾಗಿದೆ.
* ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಲು ಕ್ರಮ
* ಪರಿಷತ್ ಸದಸ್ಯರ ವೇದಿಕೆ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರಕಾರಕ್ಕೆ ಸಲಹೆ ನೀಡಲು ಕ್ರಮ
* ಸದನದಲ್ಲಿ ರಚನಾತ್ಮಕ ಚರ್ಚೆಗೆ ಪರಿಷತ್ ಸದಸ್ಯರ ಜತೆ ಈಗಾಗಲೇ ಚರ್ಚಿಸಲಾಗಿದೆ.
* ಸದನ ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು ವಹಿಸಲಾಗಿದೆ.
* ಯುಕೆಪಿ, ಮಹಾದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆ,
* ಮೊದಲ ವಾರ ಹಾಗೂ ಎರಡನೇ ವಾರದಲ್ಲಿ ಮಂಗಳವಾರ ಮತ್ತು ಬುಧವಾರ ದಿನಗಳಂದು
* ಅಧಿವೇಶನ ನಡೆಸಲು ಈ ಬಾರಿ 20 ಕೋಟಿ ಅಂದಾಜಿಸಲಾಗಿದೆ.
* ಶಾಸಕರ ಭವನ ನಿರ್ಮಿಸಲು ಕೆಲವು ಪ್ರಸ್ತಾವನೆಗಳು ಬಂದಿವೆ. ಇವುಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ.
* ತಾಜ್ ಗ್ರುಪ್, ಕೆ.ಎಲ್.ಇ. ಹೀಗೆ ಅನೇಕ ಸಂಸ್ಥೆಗಳು ಶಾಸಕರ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು.
* ಶಾಸಕರ ಹಾಜರಾತಿ ಹೆಚ್ಚಳಕ್ಕೆ ಕೂಡ ಆದ್ಯತೆ ನೀಡಲಾಗುವುದು.
* ಬೆಳಗಾವಿ ಸುವರ್ಣ ವಿಧಾನಸೌಧ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
* ಬೆಳಗಾವಿ ವಿಭಜನೆ ಸಾಧಕ-ಬಾಧಕಗಳ ಬಗ್ಗೆ ಸರಕಾರದ ಹಂತದಲ್ಲಿ ಚರ್ಚೆಯಾಗಬೇಕಿದೆ.
* ಪರಿಷತ್ತಿನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ
* 150 ಚುಕ್ಕೆ ಗುರುತಿನ ಪ್ರಶ್ನೆಗಳನ್ನು ಸ್ವೀಕರಿಸಲಾಗಿದೆ
* ಈ ಬಾರಿ 81 ಗಮನಸೆಳೆಯುವ ಸೂಚನೆಗಳು ಬಂದಿರುತ್ತವೆ.






