ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು
ಕೋಲಾರ, 2-ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ಮಹಾತ್ಮ ಗಾಂಧಿಜೀ ಅವರ 155 ನೇ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗಾಂಧಿ ವಿಚಾರ ಧಾರೆ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಕೋಲಾರ ಸಂಸದ ಶ್ರೀ ಎಂ.ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್. ಅನಿಲ್ ಕುಮಾರ್, ಇಂಚರ ಗೋವಿಂದರಾಜು, ಜಿಲ್ಲಾಧಿಕಾರಿ ಅಕ್ರಮ್ ಪಾಷಾ, ಗ್ಯಾರೆಂಟಿ ಯೋಜನೆ ಅನುಷ್ಠಾನದ ಜಿಲ್ಲಾಧ್ಯಕ ವೈ.ಶಿವಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು
ಇದೆ ಸಂದರ್ಭದಲ್ಲಿ ಸರ್ವಧರ್ಮ ಸಮನ್ವಯತೆ ಗಾಗಿ ಪ್ರಾರ್ಥನೆ, ಗಾಂಧಿ ಭಜನೆ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಗಳು ನಡೆದವು
ಸಾಹಿತಿ ಶ್ರೀ ರವೀಂದ್ರ ಸಿಂಗ್ ಅವರು ಮಹಾತ್ಮ ಗಾಂಧಿಯವರ ವಿಚಾರ ಧಾರೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೂತ್ತೂರು ಮಂಜುನಾಥ ವಹಿಸಿದ್ದರು






