ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ವಿರುದ್ಧ ಎಫ್ ಐಆರ್

Belaguam:

Font size:

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ್ದ ದೂರಿನ್ವಯ ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್ ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದ್ದಾರೆ. ಸಿ.ಟಿ.ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಮನಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬಸವರಾಜ ಹೊರಟ್ಟಿ ಭೇಟಿಯಾದ ಡಿಸಿಎಂ, ಸಚಿವರು
ಸಚಿವರ ವಿರುದ್ಧ ಸಿ.ಟಿ.ರವಿ ಬಳಸಿದ ಪ್ರಕರಣ ನಡೆಯುತ್ತಿದ್ದಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಚಿವ ಹಾಗೂ ಪರಿಷತ್ ನ ಕಾಂಗ್ರೆಸ್ ಸಭಾ ನಾಯಕ ಬೋಸರಾಜು, ಸಚಿವ ರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಡಗಡಿ, ಡಾ.ಶರಣಪ್ರಕಾಶ್ ಪಾಟೀಲ್, ಹಿರಿಯ ಸದಸ್ಯರಾದ ಹರಿಪ್ರಸಾದ್, ನಾಗರಾಜ್ ಯಾದವ್, ಉಮಾಶ್ರೀ, ಶಾಸಕಿಯರಾದ ನಯನ ಮೋಟಮ್ಮ, ರೂಪಾ ಶಶಿಧರ್, ಲತಾ ಮಲ್ಲಿಕಾರ್ಜುನ್, ಅನ್ನಪೂರ್ಣ ತುಕಾರಂ ಸೇರಿದಂತೆ ಕಾಂಗ್ರೆಸ್ ಶಾಸಕರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಸಿ. ಟಿ ರವಿ ಅವಾಚ್ಯ ಪದ ಬಳಕೆ

ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ , ಡಿಸೆಂಬರ್ 19 : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.

ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿಟಿ ರವಿಯವರು ಅವಾಚ್ಯ ಪದ ಬಳಕೆಯನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಅವಾಚ್ಯ ಪದ ಬಳಸಿದ್ದಾರೆಂದು ಹಲವು ಸದಸ್ಯರು ಹೇಳುತ್ತಿದ್ದು, ತಾನು ವಿಧಾನಪರಿಷತ್ತಿನಲ್ಲಿ ಇರಲಿಲ್ಲ ಎಂದು ತಿಳಿಸಿದರು.

ಇಂತಹ ಪದಪ್ರಯೋಗದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನನೊಂದಿದ್ದು, ಇಂತಹ ಪದಬಳಕೆ ಒಂದು ರೀತಿಯ ಲೈಂಗಿಕ ದೌರ್ಜನ್ಯವಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿ. ಟಿ ರವಿ ಅಸಭ್ಯ ಪದ ಬಳಕೆ:

ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ , ಡಿಸೆಂಬರ್ 19, :

ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್ ಸಭಾಪತಿ ಯವರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿ. ಟಿ.ರವಿ ಅವರು ಆರೋಪವನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Prev Post ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು.
Next Post ಶಬರಿಮಲೆ ಅಯ್ಯಪ್ಪ‌ ಸ್ವಾಮಿ ದರ್ಶನಕ್ಕೆ ತೆರಳುವ ಯಾತ್ರಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಬಗ್ಗೆ ಕೇರಳ ಮತ್ತು ಹೆಚ್ಚುವರಿ ಪೊಲೀಸ್ ಕೋ-ಆರ್ಡಿನೇಟರ್ ಶಬರಿಮಲೆ ‌ಅವರು ಹೊರಡಿಸಿರುವ ಮಾರ್ಗಸೂಚಿ