ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Belaguam:

Font size:

ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ, ಡಿ.19 -

"ಬಿಜೆಪಿ ಪಕ್ಷ ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, "ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲು ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ.
ಶಾಸಕ ಮುನಿರತ್ನ ವಿಚಾರದಲ್ಲಿಯೂ ಬಿಜೆಪಿ ಹೀಗೆ ವರ್ತನೆ ಮಾಡಿತು" ಎಂದು ಕಿಡಿಕಾರಿದರು.

ಸರ್ಕಾರ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದೇ ಎಂದು ಕೇಳಿದಾಗ, "ಕಾನೂನೇ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿದೆ, ಸರ್ಕಾರವಲ್ಲ" ಎಂದು ತಿಳಿಸಿದರು.

Prev Post ಸಿಎಂ ಸಿದ್ದರಾಮಯ್ಯನವರಿಗೆ ಅಧಿಕಾರದ ವ್ಯಸನ, ಅಂಬೇಡ್ಕರ್‌ಗೆ ದ್ರೋಹ ಬಗೆದ ಕಾಂಗ್ರೆಸ್‌ಗೆ ಸೇರ್ಪಡೆಯಾದ ಸಿದ್ದರಾಮಯ್ಯ ;ವಿಧಾನಸಭೆಯ ಪ್ರತಿಪಕ್ಷ ನಾಯಕರಾದ ಶ್ರೀ ಆರ್‌.ಅಶೋಕ ಅವರ ಪತ್ರಿಕಾ ಪ್ರಕಟಣೆ
Next Post ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್