ದಿ ಗೋಲ್ಡನ್ ಚಾರಿಯೇಟ್' ರೈಲು ಪುನಾರಂಭ – ಡಿಸೆಂಬರ್ 21ರಂದು ಮುಖ್ಯಮಂತ್ರಿಗಳಿಂದ ಚಾಲನೆ

BANGALORE:

Font size:

ದಿ ಗೋಲ್ಡನ್ ಚಾರಿಯೇಟ್' ರೈಲು ಪುನಾರಂಭ – ಡಿಸೆಂಬರ್ 21ರಂದು ಮುಖ್ಯಮಂತ್ರಿಗಳಿಂದ ಚಾಲನೆ

ಬೆಂಗಳೂರು, ಡಿ. 20-

ದಕ್ಷಿಣ ಭಾರತದ ಏಕೈಕ ಐಷಾರಾಮಿ ರೈಲು ದಿ ಗೋಲ್ಡನ್ ಚಾರಿಯೇಟ್ ರೈಲನ್ನು ಪುನಾರಂಭಿಸಲಾಗಿದ್ದು, 2024ನೇ ಡಿಸೆಂಬರ್ 21 ರಂದು ಬೆಳಿಗ್ಗೆ 09.30 ಗಂಟೆಗೆ ಯಶವಂತಪುರ ರೈಲು ನಿಲ್ಯಾಣದ ಪ್ಲಾಟ್ ಫಾರ್ಮ್ 06 ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಿರುವರು.

ದಿ ಗೋಲ್ಡನ್ ಚಾರಿಯೇಟ್' ರೈಲನ್ನು IRCTC ರವರು ನಿರ್ವಹಣೆ ಮಾಡುತ್ತಿದ್ದು ಪ್ರಸ್ತುತ 2024-25ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರವಾಸ ಕಾರ್ಯಕ್ರಮಗಳು ಹೆಚ್ಚಿರುವುದರಿಂದ ಕರ್ನಾಟಕ ರಾಜ್ಯದ ಪ್ರವಾಸಿ ತಾಣಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುವುದು ಸೂಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ‘ದಿ ಗೋಲ್ಡನ್ ಚಾರಿಯೇಟ್' ರೈಲನ್ನು ವುನಾರಂಭಿಸಲಾಗಿದೆ

ಇದೇ 2024ರ ಡಿಸೆಂಬರ್ 21 ರಿಂದ ‘ದಿ ಗೋಲ್ಡನ್ ಚಾರಿಯೇಟ್' ರೈಲು ಬೆಂಗಳೂರಿನಿಂದ ಹೊರಟು, ಮೈಸೂರು - ಕಾಂಚಿಪುರಂ - ಮಹಾಬಲಿಪುರಂ - ತಂಜಾವುರ್ - ಚೆಟ್ಟಿನಾಡು - ಕೊಚ್ಚಿನ್ - ಚರ್ತಲ/ಮರೈಕುಲಮ್ - ಬೆಂಗಳೂರು ಮಾರ್ಗವಾಗಿ ಸಂಚಾರ ಪ್ರಾರಂಭಿಸಲಿದೆ.

ಈ ಸಮಯದಲ್ಲಿ ಮಾನ್ಯ ಕೇಂದ್ರ ರಾಜ್ಯ ರೈಲ್ವೆ ಸಚಿವರು, ಮಾನ್ಯ ಉಪ ಮುಖ್ಯಮಂತ್ರಿಗಳು, ಮಾನ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಸೇರಿದಂತೆ ರೈಲ್ವೇ ಇಲಾಖೆ ಅಧಿಕಾರಿಗಳು, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರವಾಸೋದ್ಯಮ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Prev Post ರಾಹುಲ್ ಗಾಂಧಿ ತೇಜೋವಧೆ ಮಾಡಿದರೆ ಸುಮ್ಮನೆ ಇರುವುದಕ್ಕೆ ಸಾಧ್ಯವೇ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Next Post 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ