ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 10 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

BANGALORE:

Font size:

ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ನೀಡಿಕೆ ಸಭೆಯ ಮುಖ್ಯಾಂಶಗಳು:

• ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 10 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
• ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್‌ ಮ್ಯಾನುಫಾಕ್ಚರಿಂಗ್‌ ಕ್ಲಸ್ಟರ್‌ ನಲ್ಲಿ ಸೆಮಿಕಂಡಕ್ಟರ್‌ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
• ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಲು ಸೂಚನೆ ನೀಡಿದರು.
• ಕೆಐಎಡಿಬಿಯಿಂದ ಕೈಗಾರಿಕೆಗಳನ್ನು ಆರಂಭಿಸಲು ಜಮೀನು ಪಡೆಯುವ ಕಂಪೆನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆಯನ್ನು ಆರಂಭಿಸದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಬೇಕು.
• ಸರ್ಕಾರದ ನಿಯಮಾವಳಿಗೆ ಅನುಸಾರವಾಗಿ ಕೈಗಾರಿಕೆಗಳು ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.

ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 10 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

Prev Post ಬೆಳಗಾವಿ ಅಧಿವೇಶನ ಶತಮಾನೋತ್ಸವ; ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್
Next Post ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಕಾನೂನು ಸಮರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ದೂರು