ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆಮಾಡಿ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

BANGALURU:

Font size:

ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆಮಾಡಿ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ. ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನುಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ ಎಂದು ಹೇಳಿದ್ದಾರೆ.

ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿ ಎಂದು ಅವರು ಹಾರೈಸಿದ್ದಾರೆ.

Prev Post ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ
Next Post ಜನರಿಗೆ ಅನುಕೂಲವಾಗುವಂಥ ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ.