ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರಿದರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

BANGALURU:

Font size:

ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರಿದರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ಹೊಸ ವರ್ಷ ಆಚರಣೆ; ಬೆಂಗಳೂರು ವ್ಯಾಪ್ತಿಯ ಅಧಿಕಾರಿಗಳಿಗೆ ರಜೆ ಮೇಲೆ ತೆರಳದಂತೆ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.29

"ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಇದನ್ನು ಮನವಿಯಾಗಿಯಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮಾಧ್ಯಮಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

00
ಬೆಂಗಳೂರು, ಡಿ. 30:

"ನಗರದಲ್ಲಿ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯು ಎಸ್ ಎಸ್ ಬಿ ಇಲಾಖೆಯ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಸಿಬ್ಬಂದಿ ವರ್ಗಕ್ಕೆ ರಜೆ ನೀಡದಂತೆ ಸೂಚನೆ ನೀಡಿದ್ದೇನೆ. ಎಲ್ಲರೂ ಸಹ ನಗರದಲ್ಲಿಯೇ ಇರಬೇಕು ಎಂದು ತಿಳಿಸಲಾಗಿದೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ನಗರದಲ್ಲಿ ಮಾಧ್ಯಮಳಿಗೆ ಪ್ರತಿಕ್ರಿಯೆ ನೀಡಿದ ಅವರು, "ಮೂರನೇ ತಾರೀಕಿನ ತನಕ ಜನರು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಇರುತ್ತಾರೆ. ಬಹಳ ಜಾಗ್ರತೆಯಿಂದ ಎಲ್ಲಾ ವ್ಯವಸ್ಥೆ ಮಾಡಬೇಕು. ಜನರಿಗೆ ಸೇವೆಯನ್ನು ನೀಡಬೇಕು ಹಾಗೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು. ಅದಕ್ಕಾಗಿ ಬೆಂಗಳೂರು ನಗರದ ಎಲ್ಲಾ ವಲಯದ ಅಧಿಕಾರಿಗಳು ಹಾಜರು ಇರಬೇಕು ಎಂದು ಸೂಚನೆ ನೀಡಿದ್ದೇನೆ" ಎಂದರು.

ಬಿಜೆಪಿಯು ಡಿ.ಕೆ. ಶಿವಕುಮಾರ್ ಅವರನ್ನೇ ಹೆಚ್ಚು ಗುರಿಯಾಗಿಸಿಕೊಂಡಿದೆ ಎನ್ನುವ ಬಗ್ಗೆ ಕೇಳಿದಾಗ, "ಯಾರು ಹೆಚ್ಚು ಶಕ್ತಿ, ಸಾಮರ್ಥ್ಯ ಹೊಂದಿರುತ್ತಾರೋ ಅವರನ್ನು ಗುರಿಯಾಗಿಸುತ್ತಾರೆ" ಎಂದು ಹೇಳಿದರು.

ಗುತ್ತಿಗೆದಾರ ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಡಿ.ಕೆ.ಶಿವಕುಮಾರ್ ಅವರ ತೊಡೆಯ ಮೇಲೆ ಕುಳಿತಿರುವ ಫೋಟೋವನ್ನು ವಿಜಯೇಂದ್ರ ಅವರು ಬಿಡುಗಡೆ ಮಾಡಿರುವ ಬಗ್ಗೆ ಕೇಳಿದಾಗ, "ಯಾರ್ಯಾರು, ಎಂತೆಂತಹ ವ್ಯಕ್ತಿಗಳು ಅವರ ತೊಡೆಯ ಮೇಲೆ ಕುಳಿತಿದ್ದಾರೆ ಎನ್ನುವುದನ್ನು ನಾನು ತೋರಿಸಲೇ" ಎಂದು ತಿರುಗೇಟು ನೀಡಿದರು.

"ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು"ಎಂದು ತಿಳಿಸಿದರು.

"ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 7 ದಿನ ಶೋಕಾಚಾರಣೆ ಘೋಷಣೆ ಮಾಡಿದ್ದು, ಕೇವಲ ಸರ್ಕಾರಿ ಕಾರ್ಯಕ್ರಮಗಳನ್ನು ಮಾತ್ರ ತಡೆ ಹಿಡಿಯಲಾಗಿದೆ. ಅದರ ಹೊರತಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಹೀಗಾಗಿ ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು" ಎಂದರು.

"ಹೊಸವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇರಬೇಕು. ಪಾಲಿಕೆ ಹಾಗೂ ಪೊಲೀಸರು ವ್ಯಾಪಾರಸ್ಥರಿಗೆ ಮಾರ್ಗಸೂಚಿ ನೀಡಲಿದ್ದಾರೆ. ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ" ಎಂದು ತಿಳಿಸಿದರು.

Prev Post ಪ್ರಿಯಾಂಕ್ ಕಲಬುರ್ಗಿಯ ನಿಜಾಮ ಅಲ್ಲ, ಅವರ ಅನುಯಾಯಿಗಳು ರಜಾಕಾರರಲ್ಲ; ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ‌ ನೀಡಲಿ : ಪ್ರತಿಪಕ್ಷ ನಾಯಕ ಆರ್.ಅಶೋಕ
Next Post ನಮ್ಮದು ಸ್ವಚ್ಛ ಆಡಳಿತದ ಸರ್ಕಾರ, ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್