Font size:
ಕನ್ನಡ ಪುಸ್ತಕಗಳ ಮಾರಾಟ ಮೇಳ ಉದ್ಘಾಟನೆ.
ಕನ್ನಡ ಪುಸ್ತಕ ಪ್ರಾಧಿಕಾರ ಮೈಸೂರಿನ ದಸರಾ ಮಹೋತ್ಸವದ ಸಂದರ್ಭದಲ್ಲಿ ಆಯೋಜಿಸಿದ್ದ ಕನ್ನಡ ಪುಸ್ತಕಗಳ ಮಾರಾಟ ಮೇಳವನ್ನು ನಾಡೋಜ ಡಾ.ಹಂಪಾ ನಾಗರಾಜಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶ್ರೀ ಶಿವರಾಜ ತಂಗಡಗಿ ಅವರು ಇಂದು ಮೈಸೂರಿನ ಸ್ಕೌಟ್ ಮತ್ತು ಗೈಡ್ಸ್ ಮೈದಾನದಲ್ಲಿ ಉದ್ಘಾಟಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಣಿ ದೇವಿ ಮಾಲಗತ್ತಿ ಹಾಗೂ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ ಬಿ ಕಿರಣ್ ಸಿಂಗ್ ಮುಂತಾದವರು ಉಪಸ್ಥಿತರಿದ್ದರು.






