Font size:
ನಿಮಾನ್ಸ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆತ್ಮೀಯ ಸ್ವಾಗತ
ಬೆಂಗಳೂರು, ಜ. 3-
ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಜನವರಿ 03 ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ನಿಮಾನ್ಸ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಇಂದು ಬೆಳಿಗ್ಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಗೌರವಾನ್ವಿತ ರಾಷ್ಟ್ರಪತಿಗಳನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು
ಈ ಸಮಯದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಏರ್ ಮಾರ್ಷಲ್ ನಾಗೇಶ್ ಕಪೂರ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾದ ಡಾ. ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್, ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್. ಜಿ ಸೇರಿದಂತೆ ಇತರೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.






