ಇಡಿ ಅಧಿಕಾರಿಗಳೆಂದು ಸುಲೈಮಾನ್ ಹಾಜಿ ಮನೆಯ ಮೇಲೆ ದಾಳಿ, ಹಣ ಲೂಟಿ ಪ್ರಕರಣ: ಆರೋಪಿಗಳ ಪತ್ತೆಗೆ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ

Mangalore:

Font size:

ಉದ್ಯಮಿ ಸಿಂಗಾರಿ ಬೀಡಿ ಮಾಲೀಕ ಸುಲೈಮಾನ್ ಹಾಜಿ ಮನೆಗೆ ತಮಿಳುನಾಡು ನೋಂದಣಿ ಸಂಖ್ಯೆ ಇನ್ನೋವಾ ಕಾರ್ ನಲ್ಲಿ ಬಂದು ವ್ಯಕ್ತಿಗಳು, ಇಡಿ ಅಧಿಕಾರಿಗಳು ಎಂದು ನಂಬಿಸಿ, ಮನೆಯಲ್ಲಿದ್ದ ಹಣ, ಮೊಬೈಲ್ ಹಾಗೂ ದಾಖಲೆ ಪತ್ರವನ್ನು ದೋಚಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಗೃಹ ಇಲಾಖೆಯ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಶೀಘ್ರ ಪತ್ತೆಗೆ ಕ್ರಮ ಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಗೃಹ ಇಲಾಖೆಯು ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಿದ್ದು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಸುಲೈಮಾನ್ ಹಾಜಿ ಹಾಗೂ ಕುಟುಂಬಸ್ಥರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಧೈರ್ಯ ತುಂಬಿ ಧೃತಿಗೆಡದಂತೆ ತಿಳಿಸಿದ್ದು, ಶೀಘ್ರ ಕೃತ್ಯ ನಡೆಸಿರುವ ವ್ಯಕ್ತಿಗಳು ಬಂಧನವಾಗುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Prev Post ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲನೆ
Next Post ವಿರೋಧಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು ಆರೋಪ ಮಾಡಿದರೆ ಸಾಬೀತು ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ