Font size:
ಕಾಡುಗೊಲ್ಲ ಸಮುದಾಯ ನಾಯಕರು ಗುರುವಾರ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದರು.
ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುವ ರಾಜ್ಯದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಹೆಚ್ಚು ವಿವರಗಳೊಂದಿಗೆ ಸಲ್ಲಿಸಲು ಸಮುದಾಯದ ನಾಯಕರು ಗುರುವಾರ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.
2014 ರಲ್ಲಿ ರಾಜ್ಯದಿಂದ ಕೇಂದ್ರಕ್ಕೆ ಸಲ್ಲಿಕೆಯಾಗಿದ್ದ ಪ್ರಸ್ತಾವನೆಯೂ ಸೇರಿ ಕೇಂದ್ರ ಸರ್ಕಾರ ಪದೇ ಪದೇ ತಿರಸ್ಕರಿಸುತ್ತಿರುವುದರ ಬಗ್ಗೆ ಸಭೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.
ಮೈಸೂರಿನ ಬುಡಕಟ್ಟು ಅಧ್ಯಯನ ಕೇಂದ್ರದಿಂದ ಸಮಗ್ರ ವರದಿಯನ್ನು ತರಿಸಿಕೊಂಡು ಕೇಂದ್ರ ತೆಗೆದಿರುವ ತಕರಾರುಗಳಿಗೆ ಪ್ರತಿಯಾಗಿ ದಾಖಲೆಗಳ ಸಮೇತ ಮತ್ತೊಮ್ಮೆ ಕೇಂದ್ರಕ್ಕೆ ಪ್ರಸ್ತಾಪನೆ ಸಲ್ಲಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.




