ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ದಂಪತಿ

BANGALURU:

Font size:

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ದಂಪತಿ

ಜನವರಿ 11, ಉಪರಾಷ್ಟ್ರಪತಿ ಜಗದೀಪ್ ಧನಖರ್ ಹಾಗೂ ಅವರ ಪತ್ನಿ ಶ್ರೀಮತಿ ಸುದೇಶ ಧನಖರ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿರುವ ಎಲ್ಲಾ ರಾಜ್ಯಗಳ ಲೋಕಸೇವಾ ಆಯೋಗಗಳ 25ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಂತರ, ಬಿಇಎಲ್ ನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಬಿಹೆಚ್ಇಎಲ್ ನಲ್ಲಿ ಹಮ್ಮಿಕೊಳ್ಳಲಾಗಿರುವ ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಇಂದು ಸಂಜೆಯೇ ಮರಳಿ ನವದೆಹಲಿಗೆ ತೆರಳಲಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ದಂಪತಿ ಸಮೇತರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಮ್ ಸಿ ಸುಧಾಕರ್ ಸೇರಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

00000

ಬೆಂಗಳೂರು, ಜನವರಿ 11 ( ಕರ್ನಾಟಕ ವಾರ್ತೆ)
ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕೇಂದ್ರ ಲೋಕ ಸೇವಾ ಆಯೋಗದ ವತಿಯಿಂದ ನಗರದ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾದ ರಾಜ್ಯ ಲೋಕ ಸೇವಾ ಆಯೋಗಗಳ ಅಧ್ಯಕ್ಷರುಗಳ 25 ನೇ ರಾಷ್ಟ್ರೀಯ ಸಮ್ಮೇಳನವನ್ನು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳ ಪತ್ನಿ ಶ್ರೀಮತಿ ಸುದೇಶ ಧನಕರ್ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, , ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾದ ಪ್ರೀತಿ ಸುದಾನ್, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾದ ಶಿವಶಂಕರಪ್ಪ ಸಾಹುಕಾರ್, ಹರಿಯಾಣ ಲೋಕಸೇವಾ ಆಯೋಗದ ಅಧ್ಯಕ್ಷರಾದ ಅಲೋಕ್ ವರ್ಮಾ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಡಿಜಿ ಐಜಿಪಿ ಡಾ. ಅಲೋಕ್ ಮೋಹನ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ವಿವಿಧ ರಾಜ್ಯಗಳ ಲೋಕಸೇವಾ ಆಯೋಗದ ಅಧ್ಯಕ್ಷರುಗಳು ಉಪಸ್ಥಿತರಿದ್ದರು

Prev Post ಮದ್ದೂರು ತಾಲ್ಲೂಕಿನ ಚಾಕನಕೆರೆಗೆ ಬಾಗೀನ ಅರ್ಪಸಿದ ಕೇಂದ್ರ ಸಚಿವ ಶ್ರೀ HD ಕುಮಾರಸ್ವಾಮಿ ಅವರು.
Next Post ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್