ಮೈಸೂರು ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ವಿಶೇಷ ಸಾರಿಗೆ ವ್ಯವಸ್ಥೆ

:

Font size:

ಮೈಸೂರು ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ವಿಶೇಷ ಸಾರಿಗೆ ವ್ಯವಸ್ಥೆ

ಬೆಂಗಳೂರು, ಅ .೫
ಮೈಸೂರು ದಸರಾ-೨೦೨೪ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ ವೇಗದೂತ ರಾಜಹಂಸ, ಸ್ಲೀಪರ್, ಐರಾವತ, ಮಲ್ಟಿ ಆಕ್ಸಲ್ ಐರಾವತ ಕ್ಲಬ್‌ಕ್ಲಾಸ್ ಹಾಗೂ ಅಂಬಾರಿ ಕ್ಲಬ್‌ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ವಿವಿಧ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ.

ನಿಗಮದಿಂದ ೨೦೦೦ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ:
ದಸರಾ ಹಬ್ಬದ ರಜೆಗಳ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ ೯ ರಿಂದ ರವರೆಗೆ ಬೆಂಗಳೂರಿನಿAದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ ೨೦೦೦ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ. ನಂತರ ರಾಜ್ಯದ ಮತ್ತು ಅಂತರ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅಕ್ಟೋಬರ್ ೧೩ ರಿಂದ ೧೪ ರವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೆöÊ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಎರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.

ಮೈಸೂರು ದಸರಾ-೨೦೨೪ ಪ್ರಯುಕ್ತಕರಾರಸಾ ನಿಗಮದಿಂದ೬೬೦ ವಿಶೇಷ ಸಾರಿಗೆ ವ್ಯವಸ್ಥೆ / ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆ:

ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ ೨೬೦ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು ೪೦೦ ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ ೬೬೦ ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟಿçÃಯ ವಿಮಾನ ನಿಲ್ದಾಣದಿಂದ ಮೈಸೂರಿಗೆ “ಫ್ಲೆöÊ ಬಸ್” ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ.

ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆ ವಾಹನಗಳಿಂದ ಒಂದು ದಿನದ ವಿಶೇಷ ಪ್ರವಾಸ ಸಾರಿಗೆಗಳ ಕಾರ್ಯಾಚರಣೆ:
ಗಿರಿದರ್ಶಿನಿ : ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ದರ ವಯಸ್ಕರಿಗೆ: ರೂ.೪೦೦/- ಮತ್ತು ಮಕ್ಕಳಿಗೆ: ರೂ.೨೫೦/- ನಿಗಧಿಪಡಿಸಲಾಗಿದೆ.

ಜಲದರ್ಶಿನಿ : ಗೋಲ್ಡನ್ ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. ಗೆ ಪ್ರಯಾಣದರ ವಯಸ್ಕರಿಗೆ: ರೂ.೪೫೦/- ಮತ್ತು ಮಕ್ಕಳಿಗೆ: ರೂ.೩೦೦/- ನಿಗಧಿಪಡಿಸಲಾಗಿದೆ.

ದೇವದರ್ಶಿನಿ : ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣಕ್ಕೆ ಪ್ರಯಾಣದರ ವಯಸ್ಕರಿಗೆ: ರೂ.೩೦೦/-ಮತ್ತು ಮಕ್ಕಳಿಗೆ: ರೂ.೨೦೦/- ನಿಗಧಿಪಡಿಸಲಾಗಿದೆ.
ಈ ಪ್ಯಾಕೇಜ್ ಸಾರಿಗೆಗಳು ಅಕ್ಟೋಬರ್ ೩ ರಿಂದ ೧೫ ರ ಅವಧಿಯಲ್ಲಿ ಕಾರ್ಯಾಚರಿಸಲಿದ್ದು, ಬೆಳಿಗ್ಗೆ ಮೈಸೂರಿನಿಂದ ಹೊರಟು ನಿಗಧಿಪಡಿಸಿದ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಾಯಂಕಾಲ ಮೈಸೂರಿಗೆ ವಾಪಸ್ಸಾಗುತ್ತವೆ.

ಇ-ಟಿಕೇಟ್ ಬುಕಿಂಗ್‌ನ್ನು ತಿತಿತಿ.ಞsಡಿಣಛಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‌ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು “ಮಾಹಿತಿ ಕೇಂದ್ರ” ವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು.
ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರ‍್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟç ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಒಟ್ಟು ೬೯೪ ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇಕಡ ೫ ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣದರದಲ್ಲಿ ಶೇಕಡ ೧೦ ರಷ್ಟು ರಿಯಾಯಿತಿ ನೀಡುತ್ತಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆಕೋರಲಾಗಿದೆ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು / ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು(ಕಾ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Prev Post “ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಅಹ್ವಾನ
Next Post BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ