Font size:
ಹ್ಯಾಂಬರ್ಗ್ ನಲ್ಲಿ ಸಚಿವ ಪ್ರಲ್ಹಾದ ಜೋಶಿಗೆ ಆತ್ಮೀಯ ಸ್ವಾಗತ
ನವದೆಹಲಿ: ಮೂರು ದಿನಗಳ ಕಾಲ ಜರ್ಮನಿ ಪ್ರವಾಸ ಕೈಗೊಂಡಿರುವ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರನ್ನು ಜರ್ಮನಿಯ ಹ್ಯಾಂಬರ್ಗ್ ವಿಮಾನ ನಿಲ್ದಾಣದಲ್ಲಿ ಇಂದು ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಆತ್ಮೀಯ ಸ್ವಾಗತ ನೀಡಿದರು.
ನಾಳೆ ಮತ್ತು ನಾಡಿದ್ದು ಹ್ಯಾಂಬರ್ಗ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ HSC-2024 ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತದ ಸಹಕಾರವನ್ನು ಬಲಪಡಿಸಲು ದ್ವಿಪಕ್ಷೀಯ ಸಭೆಗಳಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ






