ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು, ಫೆ. 14-
ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು, ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿರುವ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಸಲುವಾಗಿ ಇಂದು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಏರ್ ಮಾರ್ಷಲ್ ನಾಗೇಶ್ ಕಪೂರ್, ಲೆಫ್ಟಿನೆಂಟ್ ಜನರಲ್ ಜೆ.ಕೆ. ಗೇರಾ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಸತ್ಯವತಿ. ಜಿ., ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಬಿ. ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ. ಜಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ
ಬೆಂಗಳೂರು, ಫೆ. 14-
ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ದಿ ಆರ್ಟ್ ಆಫ್ ಲಿವಿಂಗ್ ಇಂಟರ್ ನ್ಯಾಷನಲ್ ಸೆಂಟರ್ ವತಿಯಿಂದ ಹಮ್ಮಿಕೊಂಡಿದ್ದ 10ನೇ ಅಂತರರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅಲ್ಲಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಾಯುಸೇನೆಯ ವಿಶೇಷ ವಿಮಾನದ ಮೂಲಕ ರಾಂಚಿಗೆ ಪ್ರಯಾಣ ಕೈಗೊಂಡರು.
ಈ ಸಮಯದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಏರ್ ಮಾರ್ಷಲ್ ನಾಗೇಶ್ ಕಪೂರ್, ಲೆಫ್ಟಿನೆಂಟ್ ಜನರಲ್ ಜೆ.ಕೆ. ಗೇರಾ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಬಿ. ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ. ಜಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




