Font size:
ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಗದಗ - ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ಭೇಟಿ ನೀಡಿ, ಸನ್ಮಾನ ಸ್ವೀಕರಿಸಿದರು
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದ ಶ್ರೀ ಹೊನ್ನಕೇರಿ ಮಲ್ಲಯ್ಯನ ಮೂರ್ತಿ ಪ್ರತಿಷ್ಠಾಪನೆ, ಸಾಲಿಗ್ರಾಮ ಈಶ್ವರಲಿಂಗು ಪ್ರತಿಷ್ಠಾಪನೆ ಹಾಗೂ ಹೊನ್ನಕೇರಿ ಮಲ್ಲಯ್ಯನ ನೂತನ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಗದಗ - ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ಭೇಟಿ ನೀಡಿ, ಸನ್ಮಾನ ಸ್ವೀಕರಿಸಿ, ದೇವರ ಆಶೀರ್ವಾದ ಪಡೆದುಕೊಂಡರು. ಈ ಸಂಧರ್ಭದಲ್ಲಿ ಶಾಸಕರಾದ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ವಿ.ಸಂಕನೂರ, ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ರಾಜು ಕುರಡಗಿ ಸೇರಿದಂತೆ ಕಮೀಟಿಯ ಸದಸ್ಯರು ಉಪಸ್ಥಿತರಿದ್ದರು.






