ಹರಿಹರ ಸಮೀಪದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಪ್ರಸನ್ನಾನಂದಪುರಿ ಮಹಾ ಸ್ವಾಮಿಗಳ ನೇತೃತ್ವದಲ್ಲಿ ಸಮುದಾಯದ ಶಾಸಕರುಗಳ ಮತ್ತು ಮುಖಂಡರುಗಳ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಿತು.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಸ್ವಾಮೀಜಿ, ಶಾಸಕರಾದ ಬಿ.ಎಂ.ನಾಗರಾಜ,ಟಿ.ರಘುಮೂರ್ತಿ, ಬಸನಗೌಡ ತುರ್ವಿಹಾಳ, ರಾಜಾ ವೇಣುಗೋಪಾಲ ನಾಯಕ,ಡಾ.ಶ್ರೀನಿವಾಸ,ಲೋಕಸೇವಾ ಆಯೋಗದ ಮಾಜಿ ಸದಸ್ಯ ಜಿ.ಟಿ.ಚಂದ್ರಶೇಖರಪ್ಪ ಮತ್ತಿತರ ಮುಖಂಡರನ್ನೊಳಗೊಂಡ ವಾಲ್ಮೀಕಿ ನಾಯಕ ಸಮಾಜದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ,
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದೆ ಎನ್ನಲಾದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು, ತಳವಾರ ಹೆಸರಿನಲ್ಲಿ ನಕಲಿ ಪರಿಶಿಷ್ಟ ಪಂಗಡ ಪಡೆಯುತ್ತಿರುವದನ್ನು ತಡೆಯಲು ಅಗತ್ಯ ಕ್ರಮವಹಿಸಲು ಮನವಿ ಮಾಡಿದರು.
ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಜನಾಂಗದ ಅಹವಾಲುಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿ, ತಕ್ಷಣ ಸಭೆ ಕರೆದು ಚರ್ಚಿಸಿ ಪರಿಹರಿಸುವುದಾಗಿ ತಿಳಿಸಿದರು.