ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ

ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ನೀಲಂಬೂರು ನಗರದಲ್ಲಿ ಆರ್ಯದನ್ ಮೊಹಮ್ಮದ್ ಸಂಸ್ಮರಣಾ ಸಮಿತಿ ಅಯೋಜಿಸಿರುವ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು‌.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ ಪಕ್ಷದ ನಾಯಕರು

ತನಿಖೆಗೆ ಹೆದರಲ್ಲ;ತನಿಖೆಯನ್ನು ಎದುರಿಸಲು ಸಿದ್ಧ

ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಮುಖ್ಯಮಂತ್ರಿ ಸಿದ್ದರಾಮಯ್ಯ

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಮುಖ್ಯಮಂತ್ರಿಗಳ ಜತೆಗಿನ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು:

ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕುತಂತ್ರ ರೂಪಿಸಿದೆ. ಅವರ ಕುತಂತ್ರಕ್ಕೆ ನಮ್ಮ ಸರ್ಕಾರ ಜಗ್ಗುವುದಿಲ್ಲ ಬಗ್ಗುವುದಿಲ್ಲ.

ವಿಜಯ ದಶಮಿ ವೇಳೆಗೆ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಮನೆಗಳಿಗೆ ಹರಿಯಲಿದೆ ಕಾವೇರಿ: ಡಿಸಿಎಂ ಡಿ.ಕೆ. ಶಿವಕುಮಾರ್

65 ಅತ್ಯಾಧುನಿಕ ಆಂಬ್ಯುಲೆನ್ಸ್ ಗಳ ಸೇವೆ ಲೋಕಾರ್ಪಣೆ

ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಸಹಕಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಾಜಿ ಗಣೇಶನ್,ಪದ್ಮರಾಜ ದಂಡಾವತಿ, ಪೂರ್ಣಿಮಾ, ಕಾಟ್ಕರ್ ಸೇರಿ 5 ಜನ ಪತ್ರಕರ್ತರಿಗೆ ಟಿಎಸ್‍ಆರ್

ಹೊನ್ನಾಪುರ, ಪಾಲೆತ್ತಾಡಿ, ಕ್ರಾಂತಿ ಮಂಜುನಾಥ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ

ಕರ್ಟನ್‌ ರೈಸರ್‌ ಪತ್ರಿಕಾ ಪ್ರಕಟಣೆ

ಸೆ. 24ರಂದು ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ: ಸಚಿವ ಕೆ.ಜೆ.ಜಾರ್ಜ್

ಒಂದು ವರ್ಷದೊಳಗೆ ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರಸ್ಟ್ ಗೇಟ್ ಗಳ ಅಳವಡಿಕೆಗೆ ಕ್ರಮ: ಡಿಸಿಎಂ ಡಿ. ಕೆ. ಶಿವಕುಮಾರ್

"ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರೆಸ್ಟ್ ಗೇಟ್ ಗಳನ್ನು ಒಂದು ವರ್ಷದೊಳಗೆ ಅಳವಡಿಸಲಾಗುವುದು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಲೆಕ್ಕದಲ್ಲಿ ಮತ್ತೆ ಗೆದ್ದ ಸಿಎಂ ಸಿದ್ದರಾಮಯ್ಯ

ತುಂಗಭದ್ರ ಅಣೆಕಟ್ಟೆಯಿಂದ ಯಾವ ರಾಜ್ಯದ ಎಷ್ಟು ಎಕರೆ ಪ್ರದೇಶಕ್ಕೆ ನೀರು ಒದಗಿಸಲಾಗುತ್ತಿದೆ ಎನ್ನುವ ಬಗ್ಗೆ ಅಂಕಿ ಅಂಶ ಸಮೇತ ವಿವರಿಸಿದರು. ಎಡ ಮತ್ತು ಬಲ ದಂಡೆಯಲ್ಲಿ ಎಷ್ಟೆಷ್ಟು ಎಕರೆಗೆ ನೀರುಣಿಸಲಾಗುತ್ತಿದೆ ಎನ್ನುವ ಅಂಕಿ ಅಂಶ ಕೂಡ ಹೇಳಿದರು.

ಈ ವೇಳೆ ವೇದಿಕೆಯಲ್ಲಿದ್ದ ಕೆಲವರು ಬೇರೆ ಅಂಕಿ ಅಂಶ ಹೇಳಿ ಅವರನ್ನು ತಿದ್ದಲು ಯತ್ನಿಸಿದರು. ಆದರೆ, ಎಲ್ಲರು ಕೊಟ್ಟ ಅಂಕಿ ಅಂಶಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಬಳಿಕ ಇಲಾಖೆ ಮುಖ್ಯಸ್ಥರನ್ನು ಕರೆದು ದಾಖಲೆ ತರಿಸಿಕೊಂಡರು.

ದಾಖಲೆಗಳ ಪ್ರಕಾರ ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದ ಅಂಕಿ ಅಂಶಗಳು, ಕೊಟ್ಟ ಲೆಕ್ಕವೇ ಸರಿಯಾಗಿತ್ತು.

ಬಳಿಕ ಮುಖ್ಯಮಂತ್ರಿಗಳು ಸಭಿಕರ ಕಡೆಗೆ 👍(ಥಂಬ್ಸ್ ಅಪ್) ತೋರಿಸಿ ನನ್ನ ಲೆಕ್ಕವೇ perfect ಎಂದರು. ಜನರು ಶಿಳ್ಳೆ ಹಾಕಿ ಸಂಭ್ರಮಿಸಿದರು.

ತಜ್ಞರ ವರದಿಯ ಆಧಾರದ ಮೇಲೆ ಗೇಟ್ ಗಳ ನಿರ್ವಹಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸೆಪ್ಟೆಂಬರ್ -22: ತಜ್ಞರ ವರದಿಯ ಆಧಾರದ ಮೇಲೆ ಗೇಟ್ ಗಳ ನಿರ್ವಹಣೆ ಮಾಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು.

ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್ 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಣೆಕಟ್ಟೆಗೆ ಆಗಮಿಸಿದ್ದರು.

ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದ ಚತುಷ್ಪಥ ರಸ್ತೆ ನಿರ್ಮಿಸಿದ ಕಾಮಗಾರಿಗ ಮತ್ತು ರಾಷ್ಟ್ರೀಯ ಹೆದ್ದಾರಿ-75

ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದ ಚತುಷ್ಪಥ ರಸ್ತೆ ನಿರ್ಮಿಸಿದ ಕಾಮಗಾರಿಗ ಮತ್ತು ರಾಷ್ಟ್ರೀಯ ಹೆದ್ದಾರಿ-75 ರಿಂದ ಖಾಜಿಕಲ್ಲಹಳ್ಳಿ, ದೂಡ್ಡಾಯ್ಯೂರು ಹಾಗೂ ಖಾಜಿಕಲ್ಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ರಸ್ತೆ ನಿರ್ಮಾಣ ಕಾಮಗಾರಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ ಅವರು ಗುದ್ದಲಿ ಪೂಜೆ ನೆರವೇರಿಸಿದರು)