ಬೆಂಗಳೂರಿನಲ್ಲಿ 2500 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು
Oct. 20, 2024, 11:09 a.m.ಮಾರಸಂದ್ರದಲ್ಲಿ 40 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರು ವಶ
ಬೆಂಗಳೂರಲ್ಲಿ ಮತ್ತೆರೆಡು ಎಕರೆ ಅರಣ್ಯ ಒತ್ತುವರಿ ತೆರವು
ಮಾರಸಂದ್ರದಲ್ಲಿ 40 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರು ವಶ
ಬೆಂಗಳೂರಲ್ಲಿ ಮತ್ತೆರೆಡು ಎಕರೆ ಅರಣ್ಯ ಒತ್ತುವರಿ ತೆರವು
ಬೆಂಗಳೂರಿನಲ್ಲಿ ಹೆಲ್ತ್ ಟೂರಿಸಮ್ ಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..
ಮಹಾರಾಷ್ಟ್ರ ಚುನಾವಣೆ: ಮುಂಬೈನಲ್ಲಿ ಹಿರಿಯ ವೀಕ್ಷಕರ ಸಭೆ
ಸಚಿವರಾದ ಎಂ.ಬಿ.ಪಾಟೀಲ, ಪರಮೇಶ್ವರ ಭಾಗಿ
ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳ ಅಭೂತಪೂರ್ವ ಯಶಸ್ಸು; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ
*ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಅ. 24 & 25 ರಂದು ಉಪ ಲೋಕಾಯುಕ್ತರ ಬೆಂ. ನಗರ ಜಿಲ್ಲಾ ಪ್ರವಾಸ
ಹಸಿರು ಪಟಾಕಿಯನ್ನಷ್ಟೇ ಸಿಡಿಸಿ: ಈಶ್ವರ ಖಂಡ್ರೆ
ಅದನ್ನೆಲ್ಲ ನಾನು ಬೀದಿಯಲ್ಲಿ ನಿಂತು ಚರ್ಚೆ ಮಾಡಲೇ?ಎಲ್ಲವೂ ಬಿಜೆಪಿ ಹೈಕಮಾಂಡ್ ಗೆ ಗೊತ್ತಿದೆ ಎಂದ ಸಚಿವರು
ಕಾಂಗ್ರೆಸ್ಸಿಗರಿಗೆ ಹುಬ್ಬಳ್ಳಿ ಸೆಂಟ್ರಲ್ ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ಆಗ್ರಹ*
*- ಗೋಪಾಲ್ ಜೋಶಿ ತಪ್ಪೆಸಗಿದ್ದರೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಿ*
ಸಂಡೂರು ವಿಧಾನಸಭಾ ಕ್ಷೇತ್ರದ 150 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಮುಖಂಡರುಗಳು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಸಚಿವರಾದ ಸಂತೋಷ್ ಲಾಡ್, ಸಂಸದರಾದ ತುಕಾರಾಮ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
- ವಿಜಯಲಕ್ಷ್ಮಿ ಯಾರೆಂಬುದೇ ಗೊತ್ತಿಲ್ಲ; ಸುದ್ದಿಗೋಷ್ಠಿಯಲ್ಲಿ ಸಚಿವರ ಸ್ಪಷ್ಟನೆ
-ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ಅವರು ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ
*ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ ನಾಯಕ ಆರ್.ಅಶೋಕ*
*ಅಕ್ರಮದ ತನಿಖೆ ನಡೆದು ಸರ್ಕಾರದ ಖಾಲಿ ಖಜಾನೆಗೆ ಹಣ ಮರಳಿ ಬಂದರೆ ಒಳ್ಳೆಯದೇ ಅಲ್ಲವೇ?*
*ಬೆಂಗಳೂರು, ಅಕ್ಟೋಬರ್ 18, ಶುಕ್ರವಾರ*
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‌ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ಇಡಿಗೆ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದರು.
ಇದನ್ನು ರಾಜಕೀಯವಾಗಿ ನೋಡಬಾರದು. ನಿವೇಶನಗಳು ವಾಪಸ್ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಲಾಭವಾಗುತ್ತದೆ. ಸರ್ಕಾರದಲ್ಲಿ ಖಜಾನೆ ಖಾಲಿಯಾಗಿ ಸಂಬಳ ಕೊಡಲಾಗದ ಪರಿಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ ಖಜಾನೆಗೆ ಹಣ ಬಂದರೆ ಒಳ್ಳೆಯದು. ಇದನ್ನು ಕಾಂಗ್ರೆಸ್‌ನವರು ಸ್ವಾಗತಿಸಬೇಕು. ಇದನ್ನು ರಾಜಕಾರಣ ಎನ್ನಲು ಬಿಜೆಪಿ ನಾಯಕರೇನೂ ದೂರು ನೀಡಿಲ್ಲ ಎಂದರು.
ಅಕ್ರಮ ಹಣ ವರ್ಗಾವಣೆಯಾಗಿಲ್ಲ ಎಂದಾದರೆ 3-4 ಸಾವಿರ ಕೋಟಿ ರೂ. ಹಣದ ಅಕ್ರಮ ನಡೆದಿರುವುದು ಹೇಗೆ? ನಿವೇಶನ ಮಂಜೂರಾಗಿದೆ ಎಂದಮೇಲೆ ಅದರ ಹಣ ಯಾರಿಗಾದರೂ ಸಿಕ್ಕೇ ಸಿಕ್ಕಿರುತ್ತದೆ. ಅದಕ್ಕೆ ನಗದಿನಲ್ಲಿ ಹಣ ನೀಡಲಾಗಿರುತ್ತದೆ. ಅಂತಹ ನಗದು ಕಪ್ಪು ಹಣವೇ ಆಗಿರುತ್ತದೆ. ಇಡಿ ಬಗ್ಗೆ ಪ್ರಶ್ನೆ ಮಾಡುವವರು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದಿತ್ತು. ಆದರೆ ಸಿಎಂ ಸಿದ್ದರಾಮಯ್ಯನವರು ಕೋರ್ಟ್‌ಗೆ ಹೋಗಲೇ ಇಲ್ಲ. ಇಡಿಗೆ ಅಧಿಕಾರ ಇಲ್ಲವೆಂದಾದರೆ ಎಸ್‌ಐಟಿ ಮಾಡಲು ಸರ್ಕಾರಕ್ಕೆ ಅಧಿಕಾರವಿದೆಯೇ ಎಂದು ಪ್ರಶ್ನಿಸಬೇಕಾಗುತ್ತದೆ ಎಂದರು.
ಮುಂದಿನ ಹೋರಾಟದ ಕುರಿತು ಪಕ್ಷದ ಮಟ್ಟದಲ್ಲಿ ಚರ್ಚಿಸಲಾಗುವುದು. ಇಡಿ ದಾಳಿಯ ನಂತರ ದಾಖಲೆಗಳು ಸಿಕ್ಕ ಬಳಿ ಪರಿಶೀಲಿಸಿ ಹೋರಾಟ ಮಾಡಲಾಗುವುದು ಎಂದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದ ಕುರಿತು ಸಿದ್ಧತೆ ಪರಿಶೀಲಿಸಲು ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಡಿ ಅವರು ಬೆಳಗಾವಿಯ ಸುವರ್ಣ ಸೌಧಕ್ಕೆ ಭೇಟಿ ನೀಡಿ, ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅಲ್ಲದೇ, ಸುವರ್ಣ ವಿಧಾನ ಸೌಧದ ವೀಕ್ಷಿಸಿ, ಸ್ವಚ್ಛತೆ ಬಗ್ಗೆ ಅಗತ್ಯ ಕ್ರಮವಹಿಸಲು ಸೂಚನೆ ನೀಡಿದರು.
ಉದ್ಯೋಗ ಮೇಳದಲ್ಲಿ ಎಲೆಕ್ಟ್ರಿಕ್ ವಾಹನ ಚಾಲನೆ ಮಾಡಿದ ಕೇಂದ್ರ ಸಚಿವರು.