PRABHAVAA.COM

ಸಾಂಪ್ರಾದಾಯಿಕ ಲಾಟರಿ ಮರು ಜಾರಿಗೊಳಿಸಬೇಕು – ಕರ್ನಾಟಕ ರಾಜ್ಯ ಚಿಲ್ಲರೆ ಲಾಟರಿ ಮಾರಾಟಗಾರರ ಸಂಘದ ಕಾರ್ಯದರ್ಶಿ ಆರ್. ಪದ್ಮೋಜಿ ರಾವ್ ಆಗ್ರಹ”

Bengaluru Rural:

Font size:

ಸಾಂಪ್ರಾದಾಯಿಕ ಲಾಟರಿ ಮರು ಜಾರಿಗೊಳಿಸಬೇಕು – ಕರ್ನಾಟಕ ರಾಜ್ಯ ಚಿಲ್ಲರೆ ಲಾಟರಿ ಮಾರಾಟಗಾರರ ಸಂಘದ ಕಾರ್ಯದರ್ಶಿ ಆರ್. ಪದ್ಮೋಜಿ ರಾವ್ ಆಗ್ರಹ”

ಬೆಂಗಳೂರು, ಜುಲೈ 16 –ರಾಜ್ಯ ಸರ್ಕಾರವು ಸಾಂಪ್ರಾದಾಯಿಕ ಲಾಟರಿ ಟಿಕೆಟ್‌ಗಳನ್ನು ಪುನರ್ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಚಿಲ್ಲರೆ ಲಾಟರಿ ಮಾರಾಟಗಾರರ ಸಂಘದ ಕಾರ್ಯದರ್ಶಿ ಆರ್. ಪದ್ಮೋಜಿ ರಾವ್ ಅವರು ಮನವಿ ಮಾಡಿಕೊಂಡಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರುಕರ್ನಾಟಕ ಸರ್ಕಾರವು ಲಾಟರಿ ಮಾರಾಟವನ್ನು ನಿಲ್ಲಿಸಿರುವುದರಿಂದ ಪ್ರತಿ ವರ್ಷ 5,000 ರಿಂದ 6,000 ಕೋಟಿ ರೂಪಾಯಿ ಆದಾಯವನ್ನು ಕಳೆದುಕೊಳ್ಳುತ್ತಿದೆ. ಇತ್ತ ಕೇರಳ ಸರ್ಕಾರವು ಸಾಂಪ್ರಾದಾಯಿಕ ಲಾಟರಿ ಮೂಲಕ 10-12 ಸಾವಿರ ಕೋಟಿ ರೂಪಾಯಿ ಸಂಪಾದಿಸುತ್ತಿದೆ. 2007ರಿಂದ 2026ರವರೆಗೆ ಕರ್ನಾಟಕ ಸರ್ಕಾರವು ಲಾಟರಿ ಉಲ್ಲಂಘನೆ ಕಾಯ್ದೆಯಡಿಯಲ್ಲಿ ಮೂರು ಅಧಿಸೂಚನೆಗಳನ್ನು ಹೊರಡಿಸಿದರೂ, ಅಕ್ರಮ ಲಾಟರಿಗಳು ಇನ್ನೂ ನಿಲ್ಲಿಲ್ಲ.”ಎಂದು ಹೇಳಿದರು.

“1998ರ ಸುಪ್ರೀಂ ಕೋರ್ಟ್ ಲಾಟರಿ ನಿಯಂತ್ರಣ ಕಾಯ್ದೆಯಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿಲ್ಲ. ನಮ್ಮ ಸಂಘಟನೆ ಕಳೆದ 10-12 ವರ್ಷಗಳಿಂದ ನಿರಂತರವಾಗಿ ಲಾಟರಿ ಮಂತ್ರಾಲಯವನ್ನು ಸ್ಥಾಪಿಸಲು ಮನವಿ ಸಲ್ಲಿಸುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಾವು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ನ್ಯಾಯಾಲಯವು ಸರ್ಕಾರಕ್ಕೆ ಲಾಟರಿ ಕಾಯ್ದೆ 1998ರ ಸೆಕ್ಷನ್ 4ರಂತೆ ಮರು ಜಾರಿಗೊಳಿಸಲು ಸ್ಪಷ್ಟ ಆದೇಶ ನೀಡಿದೆ.”ಎಂದು ಅವರು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದರು.

ಪತ್ರಿಕಾ ಘೋಷ್ಠಿಯಲ್ಲಿ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸಿ. ರಾಮಕೃಷ್ಣ ಹಾಗೂ ಭಾಸ್ಕರ್ ಬಾಬು ಹೆಚ್.ಜಿ (ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳು) ಹಾಜರಿದ್ದು, ನ್ಯಾಯಾಲಯದ ಆದೇಶದ ಪ್ರತಿಗಳನ್ನು ಮಾಧ್ಯಮದ ಮುಂದೆ ಪ್ರದರ್ಶಿಸಿದರು.

“ಕೇರಳ ಸರ್ಕಾರದ ಲಾಟರಿಗಳು ಕರ್ನಾಟಕದಲ್ಲಿ ಅಕ್ರಮವಾಗಿ ನಡೆಯುತ್ತಿದ್ದು, ಅದರಿಂದ ಕೇರಳಕ್ಕೆ ಸಂಪನ್ಮೂಲಗಳು ಹರಿದು ಹೋಗುತ್ತಿವೆ. ಇದು ಕರ್ನಾಟಕದ ಆರ್ಥಿಕತೆಗೆ ದೊಡ್ಡ ನಷ್ಟ. ಆದ್ದರಿಂದ ಸರ್ಕಾರವು ತಕ್ಷಣ ಕ್ರಮ ಕೈಗೊಂಡು ಸಾಂಪ್ರಾದಾಯಿಕ ಲಾಟರಿ ಮರು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು

Comments

Leave a Comment

Prev Post *ಅನುಷ್ಠಾನಕ್ಕೆ ಬಂದ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ
Next Post ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ, ಆರೋಪಿ ಪರಾರಿಯಲ್ಲಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News