PRABHAVAA.COM

ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ, ಆರೋಪಿ ಪರಾರಿಯಲ್ಲಿ

Dakshina Kannada:

Font size:

ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ, ಆರೋಪಿ ಪರಾರಿಯಲ್ಲಿ

ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ, ಆರೋಪಿ ಪರಾರಿಯಲ್ಲಿ

From Jayaram Udupi

ಬಂಟ್ವಾಳ/ದಕ್ಷಿಣ ಕನ್ನಡ ಜಿಲ್ಲೆ:

ಬಿ.ಸಿ.ರೋಡ್ ನಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ.

ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, "ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ" ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದನು ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.

Comments

Leave a Comment

Prev Post ಸಾಂಪ್ರಾದಾಯಿಕ ಲಾಟರಿ ಮರು ಜಾರಿಗೊಳಿಸಬೇಕು – ಕರ್ನಾಟಕ ರಾಜ್ಯ ಚಿಲ್ಲರೆ ಲಾಟರಿ ಮಾರಾಟಗಾರರ ಸಂಘದ ಕಾರ್ಯದರ್ಶಿ ಆರ್. ಪದ್ಮೋಜಿ ರಾವ್ ಆಗ್ರಹ”
Next Post BMTC ಬಸ್ಸುಗಳಲ್ಲಿ ಶಬ್ಧಮಾಲಿನ್ಯ ತಡೆಗೆ ಕಠಿಣ ಕ್ರಮ: ಮೊಬೈಲ್ ಲೌಡ್‌ಸ್ಪೀಕರ್ ಹಾಡುಗಳಿಗೆ ಸಂಪೂರ್ಣ ನಿಷೇಧ,

ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ; ದುಷ್ಕರ್ಮಿಗಳು ಪರಾರಿ.

ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ; ದುಷ್ಕರ್ಮಿಗಳು ಪರಾರಿ.

ಬೆಂಗಳೂರು ಪೊಲೀಸ್‌ ತ್ವರಿತ ಕಾರ್ಯಾಚರಣೆ: ಇಬ್ಬರು ವೃದ್ಧರ ರಕ್ಷಣೆ

ಬೆಂಗಳೂರು ಪೊಲೀಸ್‌ ತ್ವರಿತ ಕಾರ್ಯಾಚರಣೆ: ಇಬ್ಬರು ವೃದ್ಧರ ರಕ್ಷಣೆ

ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸೆ ಜಾಲ ಭೇದನೆ – ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳು ಬಂಧನ

ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸೆ ಜಾಲ ಭೇದನೆ – ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳು ಬಂಧನ

ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಚೇತನ್ ಮಂಗಳೂರು ಸಮೀಪ ಪೊಲೀಸರ ಬಲೆಗೆ!

ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಚೇತನ್ ಮಂಗಳೂರು ಸಮೀಪ ಪೊಲೀಸರ ಬಲೆಗೆ!

ಡ್ರಗ್ ಪೆಡ್ಲರ್ ಜಲೀಲ್ ಪರಾರಿ ;ಸಮಾಜ ಸೇವೆ ಹೆಸರಿನಲ್ಲಿ ಡ್ರಗ್ ದಂಧೆ ಮಾಡುತ್ತಿದ್ದ ಜಲೀಲ್ ಪರಾರಿ

ಡ್ರಗ್ ಪೆಡ್ಲರ್ ಜಲೀಲ್ ಪರಾರಿ ;ಸಮಾಜ ಸೇವೆ ಹೆಸರಿನಲ್ಲಿ ಡ್ರಗ್ ದಂಧೆ ಮಾಡುತ್ತಿದ್ದ ಜಲೀಲ್ ಪರಾರಿ

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ: ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯ

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ: ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯ

Read all News