18.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

:

Font size:

18.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಾರ್ಚ್ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಮಾರ್ಚ್ 25ರ ತನಕವೂ ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ತನಕವೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಈ ಮಳೆಯು ಮಾರ್ಚ್ 29ರ ತನಕ ಮುಂದುವರಿಯುವ ಸೂಚನೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 20ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

Comments

Leave a Comment

Prev Post ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ
Next Post ಆಟೋಗಳಿಗೆ ಅನಿಲ ಕೊರತೆ: ಚಾಲಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News