PRABHAVAA.COM

ಬಿಡದಿ ಟೌನ್ ಶಿಪ್; ಮುಖ್ಯಮಂತ್ರಿ ಸತ್ಯ ಮುಚ್ಚಿಟ್ಟು ನುಣಚಿಕೊಳ್ಳುತ್ತಿದ್ದಾರೆ!! ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡರ ವಾಗ್ದಾಳಿ

Bengaluru Urban:

Font size:

ಇದು ಅಭಿವೃದ್ಧಿಯಲ್ಲ, ರೈತರ ಮರಣಶಾಸನ - ನಿಖಿಲ್ ಕುಮಾರಸ್ವಾಮಿ

ಬೆಂಗಳೂರು 18 ಆಗಸ್ಟ್ 2026

ಬಿಡದಿ ಟೌನ್ಶಿಪ್ ಯೋಜನೆ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳು ಸತ್ಯವನ್ನು ಮುಚ್ಚಿಟ್ಟು ನುಣಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಆರೂಪಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಬಿಡದಿ ಟೌನ್‌ಶಿಪ್ ವಿರೋಧಿ ಬೃಹತ್ ಪ್ರತಿಭಟನಾ ಸಭೆ ಮತ್ತು ವಿಧಾನಸೌಧ ಛಲೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಏಳೂವರೆ ಸಾವಿರ ಎಕರೆ ಭೂಮಿ ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಟೌನ್ ಶಿಪ್ ವಿರೋಧಿಸಿ ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಮುಖ್ಯಮಂತ್ರಿ ಈ ಟೌನ್ಷಿಪ್ ಯೋಜನೆಯನ್ನು ಮುಂದುವರಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಸತ್ಯವನ್ನು ಮರೆಮಾಚಿ ಯೋಜನೆಯನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳುತ್ತಿರುವುದು ಸರಿಯಲ್ಲ ಎಂದು ಅವರು ಹೇಳಿದರು.

ಬಿಡದಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ ನಿಖಿಲ್ ಕುಮಾರಸ್ವಾಮಿಯವರು ವಾಸ್ತವ ಸಂಗತಿಯನ್ನು ಹೇಳಿದ್ದಾರೆ. ಸಣ್ಣ ಸಣ್ಣ ರೈತರ ಭೂಮಿಯನ್ನು ಕಸಿದುಕೊಳ್ಳಲು ಸರ್ಕಾರದವರು ಹೊರಟಿದ್ದಾರೆ. ಆ ಭಾಗದಲ್ಲಿ ಫಲವತ್ತಾದ ಕೃಷಿ ಭೂಮಿ ಇದೆ. ತರಕಾರಿ, ತೆಂಗು, ಬಾಳೆ ಬೆಳೆಯುತ್ತಾರೆ. ಲಕ್ಷಾಂತರ ಲೀಟರ್ ಹಾಲನ್ನು ಅಲ್ಲಿನ ಜನರು ಉತ್ಪಾದಿಸುತ್ತಾರೆ. ಇಂತಹ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಳ್ಳಲು ಹೊರಟಿರುವುದು ಸರಿಯಲ್ಲ ಎಂದು ದೇವೇಗೌಡರು ಹೇಳಿದರು.

ಸಣ್ಣ ಮತ್ತು ಅತಿ ಸಣ್ಣ ರೈತರು ಆ ಭಾಗದಲ್ಲಿ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. 1,2 3 ಗುಂಟೆ ಜಮೀನು ಇಟ್ಟುಕೊಂಡು ಜೀವನ ಮಾಡುತ್ತಿದ್ದಾರೆ. ಅಂತವರ ಪರ ನ್ಯಾಯಾಲಯದಲ್ಲಿ ಹೋರಾಟ ನಡೆಸಲಾಗುತ್ತಿದೆ. ನಾನು ಕೂಡ ಆ ಭೂಮಿಗಳನ್ನು ನೋಡಿದ್ದೇನೆ. ಫಲವತ್ತಾದ ಭೂಮಿ, ಭೂಮಿ ವಶ ಮಾಡಿಕೊಳ್ಳಬೇಡಿ ಎಂದು ಕೋರ್ಟ್ ಹೇಳಿದೆ. ನಾವು ಮೊದಲ ಹಂತದಲ್ಲಿ ನಾವು ಇದ್ದೇವೆ. ಕುಮಾರಸ್ವಾಮಿ ಅವರು ‌ಸಿಎಂಗೆ ಪತ್ರ ಬರೆದಿದ್ದಾರೆ. ನಮ್ಮ ಪಕ್ಷದ ನಿಲುವು ಹೇಳಿದ್ದಾರೆ. ಬಿಜೆಪಿ ಅವರು ಕೂಡ ಈ ಯೋಜನೆಗೆ ವಿರೋಧ ಮಾಡಿದ್ದಾರೆ ಎಂದು ದೇವೇಗೌಡರು ಹೇಳಿದರು.

ನೈಸ್ ಯೋಜನೆ ಬಗ್ಗೆ ಕೂಡ ಕುಮಾರಸ್ವಾಮಿ ಅವರು ದನಿಯತ್ತಿ ಹೋರಾಟ ನಡೆಸುತ್ತಿದ್ದಾರೆ. ಗೌರವಾನ್ವಿತ ರಾಜ್ಯಪಾಲರು ಕೂಡ ನೈಸ್ ಭೂಮಿಯ ಬಗ್ಗೆ ಮಾತನಾಡಿದ್ದಾರೆ. ನನ್ನ ಕಾಲದಲ್ಲಿ ಸಹಿ ಆಗಿತ್ತು. ಅದು ಜೀವಂತವಾಗಿ ಉಳಿದಿಲ್ಲ. ರಾಜ್ಯಪಾಲರು ಬಿಡದಿ ರೈತರ ಜಮೀನಿಗೆ ಕೈ ಹಾಕಬೇಡಿ ಅಂದಿದ್ದಾರೆ. ಸಿಎಂ ಅವರು ವಿಷಯ ಗೊತ್ತಿಲ್ಲ ಅಂದರೆ ಅವರಿಗೆ ಅವರೇ ವಂಚನೆ ಮಾಡಿಕೊಂಡ ಹಾಗೆ. 25-26 ವರ್ಷದಿಂದ ದಂಧೆ ನಡೆಯುತ್ತಿದೆ ಎಂದು ಮಾಜಿ ಪ್ರಧಾನಿಗಳು ಕಿಡಿಕಾರಿದರು.

ಅಂಬೇಡ್ಕರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗದ ಜವಾಬ್ದಾರಿಗಳನ್ನು ಅವರು ಸಂವಿಧಾನದಲ್ಲಿ ನಿರ್ದಿಷ್ಟವಾಗಿ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷ ಯಾವಾಗಲೂ ಸಂವಿಧಾನದ ಬಗ್ಗೆ ಮಾತನಾಡುತ್ತಲೇ ಇರುತ್ತದೆ. ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಮಾನಗಳನ್ನು ಅನುಷ್ಠಾನ ಮಾಡುವ ಜವಾಬ್ದಾರಿ ಕಾರ್ಯಾಂಗದ್ದು. ಕಾರ್ಯಾಂಗ ಅಸಡ್ಡೆ ತೋರಿಸಿದರೆ ಒಪ್ಪಲು ಸಾಧ್ಯವಿಲ್ಲ. ಶಾಸಕಾಂಗದಲ್ಲಿ ನುರಿತ ಮಾಜಿ ಸಿಎಂ, ಮಂತ್ರಿಗಳು, ಶಾಸಕರ ಇದ್ದಾರೆ. ಎಲ್ಲಾ ಪಕ್ಷಗಳು ಸೇರಿ ಹಿಂದೆ ಸುದೀರ್ಘವಾಗಿ ಮಾತಾಡಿದ್ದಾರೆ. ಹೀಗಾಗಿ ನೈಸ್ ಯೋಜನೆ ವಿರುದ್ಧ ಕ್ರಮ ಜರುಗಿಸಬೇಕಾದದ್ದು ಸರ್ಕಾರದ ಆದ್ಯ ಕರ್ತವ್ಯ ಎಂದು ದೇವೇಗೌಡರು ಒತ್ತಿ ಹೇಳಿದರು.

ಸದನದಲ್ಲಿ ನೈಸ್ ಯೋಜನೆ ಟೇಕ್ ಓವರ್ ಮಾಡಬೇಕು ಎಂದು ಚರ್ಚೆ ಮಾಡಿದ್ದಾರೆ. ಈ ಯೋಜನೆಯ ಒಪ್ಪಂದಕ್ಕೆ ನಾನೇ ಸಹಿ ಹಾಕಿದ್ದೆ. ನೈಸ್ ರಸ್ತೆ ಪೂರ್ಣ ಮುಗಿದ ಮೇಲೆ ಟೌನ್ ಶಿಪ್ ನಿರ್ಮಾಣವಾದ ಮೇಲೆ ಟೋಲ್ ಸಂಗ್ರಹ ಮಾಡಬೇಕು ಎಂದು ಅಗ್ರಿಮೆಂಟ್ ಇದೆ. ಆದರೆ ಚೌಕಟ್ಟು ಒಪ್ಪಂದ (ಫ್ರೇಮ್ ವರ್ಕ್ ಅಗ್ರಿಮೆಂಟ್) ಉಲ್ಲಂಘಿಸಿ ನೈಸ್ ಕಂಪನಿಯವರು ಅಕ್ರಮವಾಗಿ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಅದರ ವಿರುದ್ಧ ಚರ್ಚೆ ನಡೆದ ಸಂದರ್ಭದಲ್ಲಿ ಇದ್ದ ಸರ್ಕಾರ ನೈಸ್ ಕಂಪನಿಗೆ ನೋಟಿಸ್ ನೀಡುತ್ತದೆ. ಆದರೆ ನೈಸ್ ಕಂಪನಿಯವನು ಅದಕ್ಕೆ ನ್ಯಾಯಾಲಯದಿಂದ ತಡೆ ತರುತ್ತಾನೆ. ಆದರೆ ಆ ತಡೆಯಾಜ್ಞೆಯನ್ನು ತೆರವು ಮಾಡಿಸಲು ಕಾರ್ಯಾಂಗ ವಿಫಲವಾಗುತ್ತದೆ ಎಂದು ಮಾಜಿ ಪ್ರಧಾನಿಗಳು ಬೇಸರ ವ್ಯಕ್ತಪಡಿಸಿದರು.

ಸಂವಿಧಾನವನ್ನು ಬಿಜೆಪಿ ಅವರು ನಾಶ ಮಾಡ್ತಾ ಇದ್ದಾರೆ ಅಂತ ಕಾಂಗ್ರೆಸ್ ಹೇಳುತ್ತೆ. ಆದರೆ ಕೋರ್ಟ್ ಟೋಲ್ ಸಂಗ್ರಹ ಅಕ್ರಮ ಅಂತ ಹೇಳಿದೆ. ಕಂಡಿಷನ್ ವಿರುದ್ದ ಯೋಜನೆ ಇದೆ ಅಂತ ಕೋರ್ಟ್ ಹೇಳಿದೆ. ಹೀಗಿದ್ದರೂ ಕಾರ್ಯಾಂಗ ಕಣ್ಣು ಮುಚ್ಚಿ ಕೂತಿದೆ. ಈ ಸರ್ಕಾರ ಶಾಸಕಾಂಗ, ಕಾರ್ಯಾಂಗ, ಅಂಬೇಡ್ಕರ್ ಸಂವಿಧಾನಕ್ಕೆ ಬೆಲೆ ಕೊಟ್ಟಿಲ್ಲ. ನೋವಿನಿಂದ ಹೇಳ್ತಾ ಇದ್ದೇನೆ. ಹೈಕೋರ್ಟ್ ಕಠಿಣ ಭಾಷೆಯಲ್ಲಿ ಹೇಳಿದೆ. ಇದರ ಬಗ್ಗೆ ‌ಮಾತಾಡೋ ನೈತಿಕ ಶಕ್ತಿ ಕೆಲವು ಮುಖಂಡರು ಕಳೆದುಕೊಂಡಿದ್ದಾರೆ.ಸರ್ಕಾರಕ್ಕೆ ಅಭಿವೃದ್ಧಿ ಮಾಡೋಕೂ ಹಣ ಇಲ್ಲ. ಮತ್ತೊಂದು ಕಡೆ ನಿತ್ಯ ನೈಸ್ ನಲ್ಲಿ ಹಣ ಲೂಟಿ ಆಗ್ತಿದೆ. ಕೋರ್ಟ್ ಒಪ್ಪಂದ ಉಲ್ಲಂಘನೆ ಮಾಡಿದೆ ಅಂತ ಹೇಳಿದೆ ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಡದಿ ಬಗ್ಗೆ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಅದಕ್ಕೆ ಸಿಎಂ ಉತ್ತರ ಕೊಟ್ಟಿಲ್ಲ. ಬಿಡದಿ ರೈತರ ಪರ ನಾನು ಪಾದಯಾತ್ರೆಗೆ ನಾನು ಹೋಗಿದ್ದೆ. ನನ್ನ ನಿಲುವಿಂದ ನಾನು ಹಿಂದೆ ಹೋಗೊಲ್ಲ. ಅವಶ್ಯತೆ ಬಿದ್ದಾಗ ನಾನು ಹೋರಾಟ ಮಾಡ್ತೀನಿ. ಸರ್ಕಾರ ಅತಿಯಾಗಿ ವ್ಯಕ್ತಿಯನ್ನ ಪರೀಕ್ಷೆ ಮಾಡಬೇಡಿ. ಮುಂದೆ ಯಾವ ಪರಿಣಾಮ ಆಗುತ್ತೋ ಗೊತ್ತಿಲ್ಲ. ಬಿಡದಿ ಟೌನ್ ಶಿಪ್ ಕೈ ಬಿಡಬೇಕು. ಕೋರ್ಟ್ ನಿರ್ಣಯ ಅನುಷ್ಠಾನ ಮಾಡಿ. ಇಲ್ಲವಾದರೆ ನಾನು ಬೀದಿಗೆ ಇಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಮಾಜಿ ಪ್ರಧಾನಿಗಳು ನೇರ ಎಚ್ಚರಿಕೆ ನೀಡಿದರು.

ಅವಶ್ಯಕತೆ ಬಿದ್ದರೆ ಮುಂದಿನ ದಿನದಲ್ಲಿ ಸತ್ಯಾಗ್ರಹ ಮಾಡ್ತೀನಿ. ಹಿಂದೆ ಸರಿಯಲ್ಲ. ನೈಸ್ ವಿರುದ್ದವೂ ಕ್ರಮ ಆಗಬೇಕು. ಅಕ್ರಮವಾಗಿ ಕೋರ್ಟ್ ಆದೇಶದ ವಿರುದ್ದ ಹಣ ಸಂಗ್ರಹ ಆಗ್ತಿದೆ. ಇದರ ಬಗ್ಗೆಯೂ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ದೇವೇಗೌಡರು ಒತ್ತಾಯ ಮಾಡಿದರು.

ಬೆಂಗಳೂರು, ಆಗಸ್ಟ್ 18: 📍

ರಿಯಲ್ ಎಸ್ಟೇಟ್ ಮಾಫಿಯಾಗೆ ಸರ್ಕಾರ ರೈತರ ಭೂಮಿಯನ್ನು ಕಸಿಯುತ್ತಿದೆ

ಇದು ಅಭಿವೃದ್ಧಿಯಲ್ಲ, ರೈತರ ಮರಣಶಾಸನ - ನಿಖಿಲ್ ಕುಮಾರಸ್ವಾಮಿ

ರೈತರನ್ನು ಹೆದರಿಸಿ, ಬೆದರಿಸಿ ಆತಂಕ ಸೃಷ್ಟಿಸಲು ಒಂದು ವರ್ಗವನ್ನೇ ಸೃಷ್ಟಿ ಮಾಡಿದ್ದಾರೆ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ

|| ಸಿಎಂ ಕುರ್ಚಿ ನೋಡಿ ಹೊಟ್ಟೆಕಿಚ್ಚು ಪಡುವ ಜಾಯಮಾನ ದೇವೇಗೌಡರ ಕುಟುಂಬದ್ದಲ್ಲ ||

|| ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ ||

***

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಪಕ್ಷದ ವತಿಯಿಂದ ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಗಡಿ ಮಾಜಿ ಶಾಸಕ ಎ.ಮಂಜುನಾಥ್ ನೇತೃತ್ವದಲ್ಲಿ ಸಾವಿರಾರು ರೈತರು ಭಾಗವಹಿಸಿ ಘೋಷಣೆ ಕೂಗಿದರು.

ರಿಯಲ್ ಎಸ್ಟೇಟ್ ಮಾಫಿಯಾಗೆ ಜಮೀನು ಕಸಿಯುತ್ತಿದೆ

ಸಭೆಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್
ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಿಯಲ್ ಎಸ್ಟೇಟ್ ಮಾಫಿಯಾ ಮಾಡಲು ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಕಸಿಯುತ್ತಿದೆ. ಅಭಿವೃದ್ಧಿ ಹೆಸರಲ್ಲಿ ರೈತರ ಮರಣಶಾಸನ ಬರೆಯಲು ಹೊರಟಿದೆ. ನಿಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮಾತಾಡುತ್ತಿದ್ದೀರಾ? ನೇರವಾಗಿ ಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಜಿಲ್ಲೆಯ 4 ಶಾಸಕರಿಗೆ ಆಶೀರ್ವಾದ ಮಾಡಿ ಸಚಿವ ಸ್ಥಾನ ನೀಡಿದ್ದಾರೆ. ಆದರೆ ಜನರ ಕಷ್ಟ ಕೇಳುವ ಕೆಲಸ ಸಚಿವರು ಮಾಡುತ್ತಿಲ್ಲ. ಈ ಯೋಜನೆ ರೂಪುಗೊಂಡಾಗ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಿರಲಿಲ್ಲ. ಸಿಎಂ ಕುರ್ಚಿ ನೋಡಿ ಹೊಟ್ಟೆಕಿಚ್ಚು ಪಡುವ ಜಾಯಮಾನ ನಮ್ಮದಲ್ಲ ಎಂದು ಸ್ಪಷ್ಟಪಡಿಸಿದರು.

ನಾವು ಅಭಿವೃದ್ಧಿ ವಿರೋಧಿಗಳಲ್ಲ

ನಾವು ಅಭಿವೃದ್ಧಿ ವಿರೋಧಿಗಳಲ್ಲ. ಉಪನಗರ ಯೋಜನೆ ಮಾಡಲೇಬೇಕೆಂದಿದ್ದರೆ ಕೆಐಎಡಿಬಿಯಲ್ಲಿ ಲಭ್ಯವಿರುವ ಬರಡು ಭೂಮಿಯನ್ನು ಬಳಸಿಕೊಳ್ಳಿ. ಅಲ್ಲಿ ಸ್ಮಾರ್ಟ್ ಸಿಟಿ ಮಾಡಲು ನಾವು ಸಿದ್ಧ. ಆದರೆ ಸಣ್ಣ, ಅತಿ ಸಣ್ಣ ರೈತರ ಹೈನುಗಾರಿಕೆ, ಕೃಷಿ ಭೂಮಿ ಕಸಿಯಬೇಡಿ ಎಂದು ಆಗ್ರಹಿಸಿದರು.

3 ಕೋಟಿವರೆಗೆ ಪರಿಹಾರ ಕೊಡುವುದಾಗಿ ಹೇಳುತ್ತಿದ್ದಾರೆ. ಆದರೆ ರೈತರ ಬದುಕು, ಜೀವನೋಪಾಯ ಹಾಳಾಗುತ್ತಿದೆ. ದಯವಿಟ್ಟು ಅವರನ್ನು ಬದುಕಲು ಬಿಡಿ" ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.

ಇದು ಕುಮಾರಸ್ವಾಮಿ ಅವರ ಕೂಸಲ್ಲ

ಇದು ಕುಮಾರಸ್ವಾಮಿ ಅವರ ಕನಸಿನ ಕೂಸು ಎಂಬ ಸಚಿವ ಎಚ್.ಸಿ.ಬಾಲಕೃಷ್ಣ ಅವರ ಹೇಳಿಕೆಗೆ ತಿರುಗೇಟು ನೀಡಿದ ನಿಖಿಲ್, "2006 ರಲ್ಲಿ ಯೋಜನೆ ಪ್ರಸ್ತಾಪವಾದಾಗ ಕುಮಾರಸ್ವಾಮಿ ಅವರು ರೈತರೊಂದಿಗೆ 3 ಸಭೆ ನಡೆಸಿದರು. ರೈತ ಮಹಿಳೆಯೊಬ್ಬರು ವಿರೋಧಿಸಿದಾಗ 2007ರ ಆಗಸ್ಟ್ 1 ರಂದು ವಿಧಾನಸಭೆಯಲ್ಲಿ ಯೋಜನೆ ಕೈಬಿಟ್ಟಿರುವುದಾಗಿ ಘೋಷಿಸಿದರು. ಅದರ ದಾಖಲೆ ಇಂದಿಗೂ ಇದೆ. ಆದ್ದರಿಂದ ಇದು ಕುಮಾರಸ್ವಾಮಿ ಅವರ ಕೂಸಲ್ಲ ಎಂದು ಹೇಳಿದರು.

ಸರ್ಕಾರದ ದ್ವಂದ್ವ ನೀತಿ ಆರೋಪ

ನೀವು ಮುಖ್ಯಮಂತ್ರಿಯಾಗುವುದಕ್ಕೂ ಮುಂಚಿನಿಂದಲೂ ಅಂದರೆ ಕಳೆದ 526 ದಿನಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೂ ಅವರ ಅಹವಾಲನ್ನು ಕೇಳಿಲ್ಲ. ಒಕ್ಕಲುತನ ಮಾಡುವ ರೈತರ ರಕ್ಷಣೆಗಾಗಿ ನಮ್ಮ ಕುಟುಂಬ ಒತ್ತು ನೀಡಿ ಪ್ರತಿಭಟನೆಗೆ ಬೆಂಬಲ ನೀಡಿದೆ" ಎಂದರು.

ಕಾಂಗ್ರೆಸ್‌ನ ಸತ್ಯಶೋಧನಾ ಸಮಿತಿಯ 200 ಪುಟದ ವರದಿಯೇ ಟೌನ್‌ಶಿಪ್‌ಗೆ ವಿರೋಧ ವ್ಯಕ್ತಪಡಿಸಿದೆ. ಆ ವರದಿಗೆ ಬೆಲೆಯೇ ಇಲ್ಲವೇ? ಮತ್ತೆ ಏಕೆ ಪರಿಶೀಲನಾ ಸಮಿತಿ ಬೇಕು? GBDA ಪ್ರಾಧಿಕಾರ ರಚಿಸಿ 2025 ರಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ದೇವೇಗೌಡರು ಸತ್ಯಾಗ್ರಹ ಎಚ್ಚರಿಕೆ ನೀಡಿದ ಮರುದಿನ ಪರಿಶೀಲನಾ ಸಮಿತಿ ಮಾಡುವುದಾಗಿ ಹೇಳಿ, ಅದೇ ದಿನ ಅಂತಿಮ ಅಧಿಸೂಚನೆ ಹೊರಡಿಸಿದ್ದಾರೆ. ಇದು ಸರ್ಕಾರದ ದ್ವಂದ್ವ ನೀತಿಗೆ ಸಾಕ್ಷಿ" ಎಂದು ಆರೋಪಿಸಿದರು.

ಒತ್ತಾಯಪೂರ್ವಕವಾಗಿ ರೈತರಿಂದ ಭೂಸ್ವಾಧೀನ ಮಾಡಿಕೊಳ್ಳುವುದನ್ನು ಕೈಬಿಡಬೇಕು" ಎಂದು ಒತ್ತಾಯಿಸಿದರು.

ದೇವೇಗೌಡರಿಗೆ ರೈತರೇ ಮೊದಲು

93 ವರ್ಷದ ಮಾಜಿ ಪ್ರಧಾನಿ ದೇವೇಗೌಡರು ಬೆಳಗ್ಗೆ ಡಯಾಲಿಸಿಸ್ ಇದ್ದರೂ "ರೈತರು ಮೊದಲು, ಆ ನಂತರ ಆಸ್ಪತ್ರೆಗೆ ಹೋಗುತ್ತೇನೆ" ಎಂದು ಹೋರಾಟಕ್ಕೆ ಬಂದಿದ್ದಾರೆ ಎಂದು ನಿಖಿಲ್ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು, ಮಾಜಿ ಹಾಗೂ ಹಾಲಿ ಶಾಸಕರು, ಸಂಸದರು, ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ರೈತ ಮುಖಂಡರು, ಸಹಸ್ರಾರು ಸಂಖ್ಯೆಯಲ್ಲಿ ರೈತರು ಉಪಸ್ಥಿತರಿದ್ದರು.

Comments

Leave a Comment

Prev Post ದಕ್ಷಿಣ ಭಾರತದ ರಾಜ್ಯಗಳು ಒಗ್ಗಟ್ಟಾಗಿರಬೇಕು: ಸಿಎಂ ಡಿ ಕೆ ಶಿವಕುಮಾರ್
Next Post 53 ಎಂಜಿನಿಯರುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ನೇಮಕಾತಿ ಪತ್ರ ವಿತರಿಸಿದ ಈಶ್ವರ ಖಂಡ್ರೆ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News